ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್ ಅಪಘಾತ, ಪ್ರಾಣಾಪಾಯದಿಂದ ವ್ಯಕ್ತಿ ಪಾರು

ವಾಣಿಜ್ಯ ನಗರಿ ಮುಂಬೈನ ಚೆಂಬೂರ್‌ನಲ್ಲಿ ಬುಧವಾರ ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್‌ನ ಒಂದು ಭಾಗ ಮುರಿದು ಕೆಲವು ಗುಡಿಸಲುಗಳ ಮೇಲೆ ಬಿದ್ದ ನಂತರ 23 ವರ್ಷದ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಚೆಂಬೂರ್‌ನಲ್ಲಿ ಬುಧವಾರ ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್‌ನ ಒಂದು ಭಾಗ ಮುರಿದು ಕೆಲವು ಗುಡಿಸಲುಗಳ ಮೇಲೆ ಬಿದ್ದ ನಂತರ 23 ವರ್ಷದ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಾಹ್ನ 3.45 ರ ಸುಮಾರಿಗೆ ವಾಶಿ ನಾಕಾದ ಓಂ ಗಣೇಶ್ ನಗರದಲ್ಲಿರುವ ಡಿಸರ್ವಾ ಕಟ್ಟಡದ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿ ತಿಳಿಸಿದ್ದಾರೆ. ಬಹುಮಹಡಿ ಕಟ್ಟಡದ ಸ್ಥಳದಲ್ಲಿದ್ದ ಸುಮಾರು 150 ಅಡಿ ಉದ್ದದ ಕ್ರೇನ್‌ನ ಒಂದು ಭಾಗವು ಮುರಿದು ಸುತ್ತಮುತ್ತಲಿನ ಎರಡು ಮೂರು ಗುಡಿಸಲುಗಳ ಮೇಲೆ ಬಿದ್ದಿದೆ.

ಘಟನೆಯಲ್ಲಿ ಐದರಿಂದ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಸ್ಥಳೀಯರನ್ನು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಸಣ್ಣಪುಟ್ಟ ಗಾಯಗಳೊಂದಿಗೆ ಒಬ್ಬ ವ್ಯಕ್ತಿ ಮಾತ್ರ ಚಿಕಿತ್ಸೆಗೆ ದಾಖಲಾಗಿರುವುದಾಗಿ ಅಪಘಾತ ಸ್ಥಳಕ್ಕೆ ಸಮೀಪವಿರುವ ಗೋವಂಡಿಯ ಶತಾಬ್ದಿ ಆಸ್ಪತ್ರೆ  ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಅಶುತೋಷ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ: Jacob Bethell ದಾಖಲೆಗಳ ಸುರಿಮಳೆ

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ': T20 ಇತಿಹಾಸದ ಅಪರೂಪದ ದಾಖಲೆ ಬರೆದ India vs England ಪಂದ್ಯ

SCROLL FOR NEXT