ಸಾಂದರ್ಭಿಕ ಚಿತ್ರ 
ದೇಶ

ಲಿವ್-ಇನ್ ಸಂಗಾತಿ ಹತ್ಯೆ: ದೇಹದ ಭಾಗ ತುಂಡು-ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಪಾಪಿ

ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮುಂಬಯಿ: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದ.  ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್‌ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.

ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದೆ ಎಂದಿದ್ದಾರೆ.

ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel