ಧನ್ಬಾದ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು, ಅನೇಕರು ಸಿಲುಕಿರುವ ಶಂಕೆ
ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ.
ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ, ಈಗಾಗಲೇ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಧನ್ ಬಾದ್ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (ಬಿಸಿಸಿಎಲ್) ಭೌರಾ ಕಾಲೇರಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಗಣಿ ಕುಸಿತವಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.