ಶರದ್ ಪವಾರ್ 
ದೇಶ

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ.

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ.

ಈ ವಿಷಯವನ್ನು ಅರಿತು ಮುಂಬೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪವಾರ್ ಅವರ ಪುತ್ರಿ ಮತ್ತು ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ ನೇತೃತ್ವದ ಎನ್‌ಸಿಪಿ ನಾಯಕರ ನಿಯೋಗ ಮುಂಬೈ ಪೊಲೀಸ್ ಮುಖ್ಯಸ್ಥ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಿ, ಕ್ರಮಕ್ಕೆ ಒತ್ತಾಯಿಸಿದೆ.

82 ವರ್ಷದ ಪವಾರ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆಯ ಸಂದೇಶ ಬಂದಿದೆ ಎಂದು ಎನ್‌ಸಿಪಿ ನಾಯಕರು ಪೊಲೀಸರಿಗೆ ತಿಳಿಸಿದ್ದಾರೆ.

ಕೊಲೆ ಬೆದರಿಕೆಯ ಸ್ಕ್ರೀನ್‌ಶಾಟ್‌ಗಳ ಪ್ರಿಂಟೌಟ್‌ಗಳನ್ನು ಸುಪ್ರಿಯಾ ಸುಳೆ ಪೊಲೀಸರಿಗೆ ಸಲ್ಲಿಸಿದ್ದಾರೆ.

ಎನ್‌ಸಿಪಿ ಮುಖ್ಯಸ್ಥರಿಗೆ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ಜೀವಬೆದರಿಕೆ ಹಾಕಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಈ ಸಂಬಂಧ ದಕ್ಷಿಣ ವಲಯದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?