ಗುಂಡಿನ ದಾಳಿ 
ದೇಶ

ಮಧ್ಯಪ್ರದೇಶ: ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿ ಓರ್ವನಿಗೆ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.

ಭೋಪಾಲ್: ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿ ಓರ್ವನಿಗೆ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.
 
ಘಟನೆಯಲ್ಲಿ ಗುಂಡಿನ ದಾಳಿ ನಡೆದಿದ್ದು,  ಗೊಲಾ ಗುತನ್ ಗ್ರಾಮದಲ್ಲಿ ಗೋದಾರ ಮತ್ತು ದೇದಾದ್ ಕುಟುಂಬಗಳ ನಡುವೆ ಈ ಘರ್ಷಣೆ ನಡೆದಿದ್ದು, ಸತ್ವಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ. 

ಗೋದಾರ ಕುಟುಂಬದ ಮೂವರು ವ್ಯಕ್ತಿಗಳಿಗೆ ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ರಾಜೇಶ್  ಗೋದಾರ ಮತ್ತು ಕೈಲಾಸ ಗೋದಾರ ಸಾವನ್ನಪ್ಪಿದ್ದಾರೆ. ಕಾನೂನು ಸುವ್ಯವಸ್ಥೆ ನಿರ್ವಹಿಸಲು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

ಗುಂಡಿನ ದಾಳಿ ಮತ್ತು ಸಾವುಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಮತ್ತು ಘರ್ಷಣೆಗೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮೃತ ಕೈಲಾಶ್ ಗೋದಾರ ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಗೋದಾರ ಅವರ ತಂದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!