ದೇಶ

ದೆಹಲಿ ಮೆಟ್ರೋದಲ್ಲಿ ಹುಡುಗಿಯ ಹಾಟ್ ಡ್ಯಾನ್ಸ್; ದಂಗಾದ ಅಂಕಲ್, ವಿಡಿಯೋ ವೈರಲ್!

Vishwanath S

ನವದೆಹಲಿ: ಡಿಎಂಆರ್‌ಸಿಯ ಎಚ್ಚರಿಕೆಯ ಹೊರತಾಗಿಯೂ ಜನರು ದೆಹಲಿ ಮೆಟ್ರೋದಲ್ಲಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡುವುದನ್ನು ನಿಲ್ಲಿಸುತ್ತಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗ್ಗೆ ವೀಡಿಯೊಗಳು ವೈರಲ್ ಆಗುತ್ತವೆ. ಅದರಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಇತ್ತೀಚೆಗೆ ಹುಡುಗಿಯೊಬ್ಬಳ ವಿಡಿಯೋ ವೈರಲ್ ಆಗುತ್ತಿದ್ದು, ಅದರಲ್ಲಿ ಹುಡುಗಿ ಮೆಟ್ರೋ ಕೋಚ್‌ನಲ್ಲಿ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.

ವಿಡಿಯೋ ವೈರಲ್ ಆದ ತಕ್ಷಣ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಕೆಲವರು ಅದನ್ನು ತಪ್ಪು ಎಂದು ಕರೆಯುತ್ತಿದ್ದರೆ ಮತ್ತೆ ಕೆಲವರು ಸರಿ ಅನ್ನುತ್ತಿದ್ದಾರೆ. ಈ ಬಗ್ಗೆ ಡಿಎಂಆರ್‌ಸಿಯಿಂದ ಯಾವುದೇ ಹೇಳಿಕೆ ಬಂದಿಲ್ಲ. ಆದರೂ ಜನರು ತಮಾಷೆಯ ಶೀರ್ಷಿಕೆಗಳೊಂದಿಗೆ ವೀಡಿಯೊವನ್ನು ಹಂಚಿಕೊಂಡು ಕಾಮೆಂಟ್ ಮಾಡುತ್ತಿದ್ದಾರೆ.

ಯುವತಿ ಡ್ಯಾನ್ಸ್ ಮಾಡುತ್ತಿದ್ದಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಇದನ್ನು ಆಶ್ಚರ್ಯ ಚಕಿತರಾಗಿ ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಟ್ವೀಟ್ ಮಾಡಿ ಅಂಕಲ್ ತನ್ನ ಸಂಪೂರ್ಣ ಅಸ್ತಿತ್ವವನ್ನು ಪ್ರಶ್ನಿಸುತ್ತಿದ್ದಾರೆ ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.

ಇನ್ನೊಬ್ಬ ಟ್ವಿಟ್ಟರ್ ಬಳಕೆದಾರರು ಅಂಕಲ್ ಬಿ ಲೈಕ್, ನಾನು ಮೆಟ್ರೋ ಹತ್ತಿದ್ದೆ, ಯೇ ಬಾರ್ ಮೆ ಕಹಾನ್ ಸೆ ಆ ಗಯಾ ಎಂದು ಬರೆದಿದ್ದಾರೆ.

ಜನರಿಗೆ DMRC ಮನವಿ
ಇದರೊಂದಿಗೆ ಯಾವುದೇ ಪ್ರಯಾಣಿಕರು ತಪ್ಪೆಸಗಿರುವುದು ಕಂಡು ಬಂದಲ್ಲಿ ಮೆಟ್ರೋ ಸಹಾಯವಾಣಿಗೆ ದೂರು ನೀಡಬೇಕು ಎಂದು ಡಿಎಂಆರ್‌ಸಿ ಪ್ರಯಾಣಿಕರಿಗೆ ಮನವಿ ಮಾಡಿದೆ. ಮೆಟ್ರೋ ನೌಕರರು ಮೆಟ್ರೋ ತಲುಪಿದ ನಂತರ ಕ್ರಮ ಕೈಗೊಳ್ಳುತ್ತಾರೆ. ಇದಲ್ಲದೇ ಮೆಟ್ರೋದಲ್ಲಿ ಪ್ರಯಾಣಿಸುವಾಗ ಸಭ್ಯವಾಗಿ ವರ್ತಿಸುವಂತೆ ಡಿಎಂಆರ್‌ಸಿ ಪ್ರಯಾಣಿಕರಿಗೆ ಮನವಿ ಮಾಡಿದೆ.

SCROLL FOR NEXT