ಮಣಿಪುರ ಹಿಂಸಾಚಾರದ ಚಿತ್ರ 
ದೇಶ

ಮಣಿಪುರ ಹಿಂಸಾಚಾರ: ಸುಳ್ಳು ಸುದ್ದಿ ಹರಡುವಿಕೆಯನ್ನು ತಡೆಯಲು ಜೂನ್ 15 ರವರೆಗೆ ಇಂಟರ್ನೆಟ್ ಸ್ಥಗಿತ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂಫಾಲ: ಬಿಕ್ಕಟ್ಟು ಪೀಡಿತ ಮಣಿಪುರ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ  ನಿಷೇಧವನ್ನು ಸರ್ಕಾರವು  ಜೂನ್ 15ರವರೆಗೆ ಇನ್ನೂ ಐದು ದಿನಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಹೇಳಿಕೆ ಪ್ರಕಾರ, ಜೂನ್ 15ರಂದು ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಲಾಗಿದೆ.

ಈಮಧ್ಯೆ, ಮಣಿಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಿಆರ್ ಸಪಂ ರಂಜನ್ ಶನಿವಾರ ಮಾತನಾಡಿ, ಕಳೆದ 24 ಗಂಟೆಗಳಲ್ಲಿ ರಾಜ್ಯದ ಯಾವುದೇ ಭಾಗದಿಂದ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಇದು ರಾಜ್ಯವು ಸಹಜ ಸ್ಥಿತಿಗೆ ಮರಳುತ್ತಿರುವುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಮಣಿಪುರದಾದ್ಯಂತ ಸದ್ಯ 349 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿವೆ ಎಂದರು. 

ಮಣಿಪುರವು ಜನಾಂಗೀಯ ಹಿಂಸಾಚಾರವನ್ನು ಕಂಡಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಈ ತಿಂಗಳ ಆರಂಭದಲ್ಲಿ ಘರ್ಷಣೆಯಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಿಂಸಾಚಾರದ ಸಂದರ್ಭದಲ್ಲಿ ಮನೆಗಳು ಸುಟ್ಟುಹೋಗಿವೆ, ರಾಜ್ಯದ ಕೆಲವು ಭಾಗಗಳಿಂದ ಹೊಸ ಘಟನೆಗಳು ವರದಿಯಾಗಿವೆ ಎಂದು ಹೇಳಿದ್ದಾರೆ.

ಒಟ್ಟು ಲೂಟಿಯಾದ 4,537 ಶಸ್ತ್ರಾಸ್ತ್ರಗಳ ಪೈಕಿ 990 ಶಸ್ತ್ರಾಸ್ತ್ರಗಳನ್ನು ರಾಜ್ಯ ಸರ್ಕಾರ ವಶಪಡಿಸಿಕೊಂಡಿದೆ. ಶಾಂತಿ ಮತ್ತು ಸೌಹಾರ್ದತೆಯನ್ನು ಪುನಃಸ್ಥಾಪಿಸಲು ರಾಜ್ಯವು ಎಲ್ಲಾ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT