ಒಡಿಶಾ ರೈಲು ಅಪಘಾತ 
ದೇಶ

ಒಡಿಶಾ ರೈಲು ದುರಂತ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 289ಕ್ಕೆ ಏರಿಕೆ

ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು...

ಕಟಕ್‌: ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪ್ರಯಾಣಿಕನನ್ನು ಬಿಹಾರ ನಿವಾಸಿ ಬಿಜಯ್ ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ಜೂನ್ 2 ರಂದು ಅಪಘಾತ ಸಂಭವಿಸಿದ ಒಂದು ದಿನದ ನಂತರ ಜೂನ್ 3 ರಂದು ಪಾಸ್ವಾನ್ ಅವರನ್ನು ಕಟಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಾಸ್ವಾನ್ ಅವರು ಬೆನ್ನುಹುರಿ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದರು. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಪಾಸ್ವಾನ್ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತು ಮತ್ತು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!