ಸಾಂದರ್ಭಿಕ ಚಿತ್ರ 
ದೇಶ

ಹಿಂಸಾಚಾರದ ಬಳಿಕ ಮಣಿಪುರದಲ್ಲಿ ಉಗ್ರರ ದಾಳಿ; 9 ಮಂದಿ ಸಾವು, 25 ಮಂದಿಗೆ ಗಾಯ

ಶಂಕಿತ ಉಗ್ರರು ಇಂಫಾಲ್ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡು ಹಾರಿಸಿದ್ದು, ಕನಿಷ್ಠ ಒಂಬತ್ತು ಗ್ರಾಮಸ್ಥರು ಸಾವಿಗೀಡಾಗಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಇಂಫಾಲ: ಶಂಕಿತ ಉಗ್ರರು ಇಂಫಾಲ್ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡು ಹಾರಿಸಿದ್ದು, ಕನಿಷ್ಠ ಒಂಬತ್ತು ಗ್ರಾಮಸ್ಥರು ಸಾವಿಗೀಡಾಗಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಾವಿನ ಸಂಖ್ಯೆ 11 ಎಂದು ಅನಧಿಕೃತ ಮೂಲಗಳು ತಿಳಿಸಿವೆ.

ಮಂಗಳವಾರ ತಡರಾತ್ರಿ ಖಮೆಲಾಕ್ ಗ್ರಾಮದ ಮೇಲೆ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದು, ಗ್ರಾಮಸ್ಥರ ಮೇಲೆ ಮನಸೋಇಚ್ಛೆ ಗುಂಡು ಹಾರಿಸಿದ್ದಾರೆ. ಈ ವೇಳೆ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ತಮ್ಮ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಜನರ ಮೇಲೆ ಗುಂಡುಗಳ ಮಳೆಗರೆದಾಗ ಸಂತ್ರಸ್ತರು ಮಲಗಿದ್ದರು ಅಥವಾ ಕೆಲವರು ಊಟ ಆಗಷ್ಟೇ ಊಟವನ್ನು ಮುಗಿಸಿದ್ದರು. ಗಾಯಾಳುಗಳನ್ನು ತಕ್ಷಣವೇ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT