ಪ್ರಧಾನಿ ಮೋದಿ 
ದೇಶ

ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.

ವಿವಿಧ ರಾಜ್ಯಗಳಿಂದ ಪಕ್ಷದ 2,500 ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಧ್ಯ ಪ್ರದೇಶ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ವಿಡಿ ಶರ್ಮಾ ಅವರು ಹೇಳಿದ್ದಾರೆ.

"ಪ್ರಧಾನಿ ಮೋದಿ ಅವರು ಜೂನ್ 27 ರಂದು ಭೋಪಾಲ್ ಗೆ ಆಗಮಿಸುತ್ತಿದ್ದಾರೆ. ಅಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ವರ್ಚುವಲ್ ಮೂಲಕ ದೇಶಾದ್ಯಂತ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ" ಎಂದು ಖಜುರಾಹೊದ ಲೋಕಸಭಾ ಸದಸ್ಯ ಶರ್ಮಾ ಅವರು ತಿಳಿಸಿದ್ದಾರೆ.

ಮಧ್ಯ ಪ್ರದೇಶದ 64,100 ಬೂತ್‌ಗಳಿಂದ 38 ಲಕ್ಷ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

‘ಪ್ರಧಾನಿ ಮೋದಿ ಅವಕಾಶ ನೀಡಿದರೆ ನಾವು ಭೋಪಾಲ್‌ನಲ್ಲಿ ರೋಡ್‌ಶೋ ಸಹ ನಡೆಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯ ಪ್ರದೇಶದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)