ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಧೋಲ್‌ಪುರದಲ್ಲಿ 1 ವರ್ಷದ ಮಗು, ತಾಯಿಗೆ ಗುಂಡಿಕ್ಕಿ ಹತ್ಯೆ

ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧೋಲ್ಪುರ್: ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ರಾಜಖೇರಾದ ಬನ್ವಾರಿ ಅವರ ಮನೆಗೆ ನುಗ್ಗಿ ಅವರ ಪತ್ನಿ ಸೀಮಾ(25) ಮತ್ತು ಕೋಣೆಯಲ್ಲಿ ಮಲಗಿದ್ದ ದಂಪತಿಯ ಒಂದು ವರ್ಷದ ಮಗಳ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರೂ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮನೆಯಲ್ಲಿ ಬನ್ವಾರಿ ಸಹ ಇದ್ದರು. ಆದರೆ ಅವರು ಭಯದಿಂದ ಒಂದು ಸ್ಥಳದಲ್ಲಿ ಅವಿತುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

"ಇಂದು ಬೆಳಗ್ಗೆ ನಮಗೆ ಮಾಹಿತಿ ಸಿಕ್ಕಿ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಗ್ರಾಮದ ಕೆಲವರ ವಿರುದ್ಧ ಆರೋಪ ಮಾಡಿದ್ದು, ಆರೋಪಿಗಳನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಧೋಲ್ಪುರ ಎಸ್ಪಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್