ಸಂಜಯ್ ರಾವುತ್ 
ದೇಶ

ಮಹಾರಾಷ್ಟ್ರ: ಶಿವಸೇನೆ ನಾಯಕ ಸಂಜಯ್ ರಾವುತ್, ಸಹೋದರನಿಗೆ ಕೊಲೆ ಬೆದರಿಕೆ; ಐದನೇ ಆರೋಪಿ ಬಂಧನ

ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಅವರ ಶಾಸಕ ಸಹೋದರ ಸುನಿಲ್ ರಾವುತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮುಂಬೈ: ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಅವರ ಶಾಸಕ ಸಹೋದರ ಸುನಿಲ್ ರಾವುತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದರು.

ಜೀವ ಬೆದರಿಕೆ ಕರೆಯಲ್ಲಿ ಆರೋಪಿಯ ಕೈವಾಡವಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾದ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಆರೋಪಿಯು ರಾಜಕೀಯ ಕಾರ್ಯಕರ್ತನೂ ಆಗಿದ್ದು, ನಗರದ ಪೂರ್ವ ಉಪನಗರಗಳ ಸ್ಥಳೀಯ ಮುಖಂಡರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾನೆ. ಆತನ ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕ ಸುನೀಲ್ ರಾವುತ್ ಅವರೊಂದಿಗಿನ ಚಿತ್ರಗಳು ಮತ್ತು ವಿಡಿಯೋಗಳನ್ನು ಸಹ ಒಳಗೊಂಡಿದೆ' ಎಂದು ಅವರು ಹೇಳಿದರು.

ಆರೋಪಿಯನ್ನು ಸದ್ಯ ಜೂನ್ 19ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈ ಸಂಬಂಧ ಕಳೆದ ವಾರ ಕಂಜುರ್ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಪೊಲೀಸರು ಆರಂಭದಲ್ಲಿ ಇಬ್ಬರನ್ನು ಬಂಧಿಸಿದ್ದು, ಅವರ ವಿಚಾರಣೆಯ ವೇಳೆ ಕೆಲವರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಬೆದರಿಕೆ ಕರೆಗಳ ಹಿಂದಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT