ಪವನ್ ಕಲ್ಯಾಣ್ 
ದೇಶ

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್‌

2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಅಮರಾವತಿ: 2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ‘ಜನ ಸೇನಾ‘ ಪಕ್ಷವು ಸ್ಪರ್ಧಿಸಲಿದೆ ಎಂದು ಜನ ಸೇನಾ ಸಂಸ್ಥಾಪಕ ಹಾಗೂ ತೆಲುಗು ನಟ ಪವನ್ ಕಲ್ಯಾಣ್‌ ಘೋಷಿಸಿದ್ದು,  ಪೂರ್ವ ಗೋದಾವರಿ ಜಿಲ್ಲೆಯ ಕತಿಪುಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಜನ ಸೇನಾ‘ ಪಕ್ಷವು ವಿಧಾನಸಭೆಯನ್ನು ಪ್ರವೇಶಿಸಲಿದ್ದು, ಹೆಜ್ಜೆ ಗುರುತುಗಳನ್ನು ಮೂಡಿಸಲಿದೆ. ಸಾಧ್ಯವಾದಷ್ಟು ಜನರ ಪರವಾಗಿ ನಿಲುತ್ತೇವೆ ಎಂದು ಪವನ್‌ ಕಲ್ಯಾಣ್ ಹೇಳಿದ್ದಾರೆ.

ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನದ ಮೂಲಕ ಚುನಾವಣಾ ಯಾತ್ರೆ ‘ವಾರಾಹಿ‘ಯನ್ನು ಆರಂಭಿಸಲಾಗಿದೆ. ಅನ್ನವರಂನಿಂದ ಆರಂಭವಾಗಿರುವ ಜನಸೇನಾ ಯಾತ್ರೆಯು ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿ ಅಂತ್ಯಗೊಳ್ಳಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪವನ್‌ ಕಲ್ಯಾಣ್ ಸೋತ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಭೀಮಾವರಂ ಕೂಡ ಒಂದಾಗಿದೆ. ಆದರೆ ಷಡ್ಯಂತ್ರದಿಂದ ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಕಲ್ಯಾಣ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಸರಿಯಾದ ರೀತಿಯಲ್ಲಿ ಆಡಳಿತ ನಡೆಸಲಿ, ಇಲ್ಲದಿದ್ದರೆ ಮುಂದೊಂದು ದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ನೆಲದ ಮೇಲೆ ಕೂರುವಂತೆ ಮಾಡುವುದಾಗಿ ಕಲ್ಯಾಣ್ ಹೇಳಿದ್ದಾರೆ.

2019ರ ಚುನಾವಣೆಯಲ್ಲಿ ರಾಪಾಕ ವರಪ್ರಸಾದ್ ಎಂಬುವವರ ಮೂಲಕ ‘ಜನ ಸೇನಾ‘ ಕೇವಲ ಒಂದು ವಿಧಾನಸಭಾ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT