ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: 10ನೇ ತರಗತಿ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕರು

ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.

ಬಾಪಟ್ಲಾ: ಟ್ಯೂಷನ್‌ಗೆ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಭೀಕರ ಕೃತ್ಯ ಆಂಧ್ರಪ್ರ ದೇಶದ ಬಾಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.

ವೆಂಕಿ ಎಂಬ ಯುವಕ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. 

ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ 15 ವರ್ಷದ ಅಮರನಾಥ್ ನನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ "ವೆಂಕಿ" ಸೇರಿದಂತೆ ಮೂವರು ಯುವಕರ ಹೆಸರನ್ನು ಹೇಳಿದ್ದಾನೆ.

ಚೆರುಕುಪಲ್ಲಿ ಮಂಡಲದ ರಾಜವೋಲು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮರನಾಥ್ ಸೈಕಲ್​​ನಲ್ಲಿ ಟ್ಯೂಷನ್​​ಗೆ ಹೋಗುತ್ತಿದ್ದಾಗ ರೆಡ್ಲಪಾಲೆಂ ಬಳಿ ಯುವಕರು ತಡೆದಿದ್ದಾರೆ. ಈ ವೇಳೆ ವೆಂಕಟೇಶ್ವರ್, ಅಮರನಾಥ್​​ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಬೆಂಕಿ ನಂದಿಸಿ ಗುಂಟೂರಿನ ಜಿಜಿಎಚ್‌ಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

21 ವರ್ಷದ ವೆಂಕಿ, ಮೃತ ಅಮರನಾಥ್ ಸಹೋದರಿಗೆ ಕಿರುಕುಳ ನೀಡುತ್ತಿದ್ದ. ಇದನ್ನು ಪ್ರಶ್ನಿಸಿದ್ದಕ್ಕೆ ವೆಂಕಿ ಈ ಕೃತ್ಯ ಎಸಗಿದ್ದಾನೆ ಎಂದು ಅಮರಾಥ್ ಕುಟುಂಬ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ