ಆದಿಪುರುಷ್ ಚಿತ್ರದ ಪೋಸ್ಟರ್ 
ದೇಶ

ಆದಿಪುರುಷ್ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿಂದೂ ಸೇನಾ!

ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಿಂದೂ ಸೇನಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. 

ನವದೆಹಲಿ: ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಿಂದೂ ಸೇನಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. 

ವಿವಾದಿತ ದೃಶ್ಯವನ್ನು ತೆಗೆಯುವವರೆಗೆ ಸಿನಿಮಾ ಮಂದಿರಗಳಲ್ಲಿ ಪ್ರದರ್ಶಿಸದಂತೆ ಹಾಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ನೀಡದಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಈ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದಲ್ಲಿ ಹಿಂದೂ ದೇವತೆಗಳನ್ನು ವಿವಾದಾತ್ಮಕ ರೀತಿಯಲ್ಲಿ ತೋರಿಸಲಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ರೀತಿಯ ಚಿತ್ರಣವನ್ನು ಯಾವುದೇ ರಾಮಾಯಣದಲ್ಲಿ ಮಾಡಲಾಗಿಲ್ಲ. ಹೀಗೆ ಚಿತ್ರ ನಿರ್ಮಾಪಕರು ದೇವರನ್ನು ಗೇಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ನಿಷೇಧಿಸಿ ವಿವಾದಿತ ದೃಶ್ಯಗಳನ್ನು ತೆಗೆಯುವವರೆಗೆ ಪ್ರದರ್ಶಿಸದಂತೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಕೇಂದ್ರ ಸರ್ಕಾರ, ಸೆನ್ಸಾರ್ ಮಂಡಳಿ, ಚಿತ್ರ ನಿರ್ದೇಶಕ ಓಂ ರಾವುತ್ ಮತ್ತು ನಿರ್ಮಾಣ ಸಂಸ್ಥೆ ಟಿ-ಸೀರೀಸ್ ಅನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಿದ್ದಾರೆ.

ಬಿಗ್ ಬಜೆಟ್ ಆದಿಪುರುಷ್ ಸಿನಿಮಾ ಜಗತ್ತಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ನೆಗಟಿವ್ ವಿಮರ್ಶೆಗಳು ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT