ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ' ಎಂದಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, 'ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು' ಎಂದರು.

ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ