ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್ 
ದೇಶ

ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಲಾಯದಿಂದ ಬಂಧನಕ್ಕೊಳಗಾಗಿರುವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರಿಸಲು ರಾಜ್ಯಪಾಲರು "ಸಮ್ಮತಿ ನೀಡಿಲ್ಲ".  ಏಕೆಂದರೆ ಅವರು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಾಜಿ ಅವರ ಬಳಿ ಇದ್ದ ಇಂಧನ ಹಾಗೂ ಅಬಕಾರಿ ಖಾತೆಗಳನ್ನು ತಂಗಮ್‌ ತೆನ್ನರಸು ಹಾಗೂ ಎಸ್‌ ಮುತ್ತುಸ್ವಾಮಿ ಅವರಿಗೆ ಮರು ಹಂಚಿಕೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಬಂಧಿತ ತಮಿಳುನಾಡು ಅಬಕಾರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈ ನ ಸ್ಥಳೀಯ ನ್ಯಾಯಾಲಯ ಜೂ.28 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!