ದೇಶ

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಮನನೊಂದು 21 ವರ್ಷದ ಯುವಕ ಆತ್ಮಹತ್ಯೆ

Nagaraja AB

ಪಾಟ್ನಾ: ಇತ್ತೀಚಿಗೆ ಪ್ರಕಟಗೊಂಡ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಮನನೊಂದ 21 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಬಾರಿಯೂ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬಿಹಾರದ ಸಮಸ್ತಿಪುರ್ ಜಿಲ್ಲೆಯ ನಿವಾಸಿ ರೋಷನ್ (21) ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 

ಮೃತನ ಸಹೋದರ ಸುಮನ್ ಕೂಡಾ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ ಆದರೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ ರೋಷನ್ ಗುರುವಾರ ಸಂಜೆ ತನ್ನ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ, ಯಾವುದೇ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಎರಡು ವರ್ಷಗಳಿಂದ ಪರೀಕ್ಷೆಗೆ ತಯಾರಿ ನಡೆಸಿದ್ದ ರೋಷನ್ ಈ ಬಾರಿ 720 ಕ್ಕೆ 400 ಅಂಕಗಳನ್ನು ಗಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಸಿಆರ್‌ಪಿಸಿಯ ಸೆಕ್ಷನ್ 174 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಕೋಟಾದಲ್ಲಿ ನಡೆದ 12ನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. 2022 ರಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. 

SCROLL FOR NEXT