ದೇಶ

ಕೇಂದ್ರ ಸರ್ಕಾರ ಡಬ್ಲ್ಯುಎಫ್ ಐ ಅಧ್ಯಕ್ಷರನ್ನು ರಕ್ಷಿಸುತ್ತಿದೆ: ರಾಕೇಶ್ ಟಿಕಾಯತ್

Lingaraj Badiger

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ  ಡಬ್ಲ್ಯುಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶನಿವಾರ ಆರೋಪಿಸಿದ್ದಾರೆ.
  
ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಮಾಡಿದ್ದಾರೆ.

ಬಿಜೆಪಿ ಸಂಸದನ ವಿರುದ್ಧ ಬಂಡಾಯವೆದ್ದಿರುವ ಕುಸ್ತಿಪಟುಗಳು ಸರ್ಕಾರದ ಒತ್ತಡಕ್ಕೆ ಸಿಲುಕಿದ್ದಾರೆ ಎಂದಿರುವ ಬಿಕೆಯು ಪ್ರಭಾವಿ ನಾಯಕ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕುಸ್ತಿಪಟುಗಳು ಮತ್ತು ಸುದೀರ್ಘ ಹೋರಾಟ ನಡೆಸಿದ ಸಮಿತಿಯು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಖಾಪ್ ಪಂಚಾಯತ್‌ಗಳು ಬೆಂಬಲಿಸುತ್ತವೆ ಎಂದು ಟಿಕಾಯತ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಕೇಂದ್ರ ಸರ್ಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ರಕ್ಷಿಸುತ್ತಿದೆ ಎಂಬುದು ಅವರ ವಿರುದ್ಧ ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್‌ನಿಂದ ಸ್ಪಷ್ಟವಾಗಿದೆ" ಎಂದು ಅವರು ಹೇಳಿದ್ದಾರೆ.

SCROLL FOR NEXT