ಗುಜರಾತ್: ಚಂಡಮಾರುತ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
ಬಿಪರ್ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಬಿಪರ್ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅಮಿತ್ ಶಾ, ಚಂಡಮಾರುತದಿಂದ ಆದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
ಇದಕ್ಕೂ ಮುನ್ನಾ ಚಂಡ ಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ನಂತರ ಕಚ್ ಮತ್ತು ಮಾಂಡ್ವಿಯ ಜಖೌ ಬಂದರಿಗೆ ತೆರಳಲಿದ್ದಾರೆ. ಆಶ್ರಯ ಮನೆಗಳಿಗೂ ಭೇಟಿ ನೀಡಿ ಜನರನ್ನು ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭುಜ್ನಲ್ಲಿರುವ ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅಮಿತ್ ಶಾ, ಸಂತ್ರಸ್ತರಿಗೆ ವಿತರಿಸಲಾಗುತ್ತಿರುವ ಆಹಾರ ಮತ್ತಿತರ ಸೌಲಭ್ಯಗಳನ್ನು ಪರಿಶೀಲಿಸುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.