ನಿಸಿತ್ ಪ್ರಮಾಣಿಕ್ 
ದೇಶ

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಶನಿವಾರ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಆಡಳಿತ ಪಕ್ಷ...

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಶನಿವಾರ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಆಡಳಿತ ಪಕ್ಷ ಆರೋಪವನ್ನು ತಳ್ಳಿಹಾಕಿದೆ.
  
ಸಾಹಿಬ್‌ಗಂಜ್ ಪ್ರದೇಶದಲ್ಲಿ ಮುಂಬರುವ ಪಂಚಾಯತ್ ಚುನಾವಣೆಗೆ ನಾಮಪತ್ರಗಳ ಪರಿಶೀಲನೆ ನಡೆಯುತ್ತಿರುವ ಬ್ಲಾಕ್ ಡೆವಲಪ್‌ಮೆಂಟ್ ಕಛೇರಿಗೆ ಪ್ರಾಮಾಣಿಕ್ ಅವರು ಭೇಟಿ ನೀಡಲು ಯತ್ನಿಸಿದಾಗ ಈ ಘಟನೆ ನಡೆದಿದೆ.

ಟಿಎಂಸಿ ಕಾರ್ಯಕರ್ತರು ಬಿಡಿಒ ಕಚೇರಿಗೆ ತೆರಳುವ ರಸ್ತೆ ತಡೆದು ಅಕ್ರಮ ನಡೆಸುತ್ತಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ನಾನು ಅಲ್ಲಿಗೆ ಹೋಗಿದ್ದೆ ಎಂದು ಸಚಿವರು ಹೇಳಿದ್ದಾರೆ.

"ನಾನು ಬಿಡಿಒ ಕಚೇರಿಗೆ ಭೇಟಿ ನೀಡಲು ಪ್ರಯತ್ನಿಸಿದಾಗ, ನನ್ನ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಲಾಯಿತು. ಅಲ್ಲದೆ ನಮ್ಮ ಮೇಲೆ ಬಾಂಬ್‌ಗಳನ್ನು ಸಹ ಎಸೆಯಲಾಯಿತು. ಟಿಎಂಸಿ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರನ್ನು ಥಳಿಸಿದರು ಮತ್ತು ನಮ್ಮ ಅಭ್ಯರ್ಥಿಗಳ ಪತ್ರಗಳನ್ನು ನಾಶಪಡಿಸಿದರು. ಇದನ್ನು ನೋಡಿಕೊಂಡು ಪೊಲೀಸರು ಸುಮ್ಮನೆ ನಿಂತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಪ್ರಾಮಾಣಿಕ್ ಆರೋಪಿಸಿದ್ದಾರೆ.

CrPC ಯ ಸೆಕ್ಷನ್ 144 ಅನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರನ್ನು BDO ಕಚೇರಿಗೆ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ "TMC ಕಾರ್ಯಕರ್ತರಿಗೆ ಮಾತ್ರ ಕಚೇರಿ ಆವರಣದ ಹೊರಗೆ ಸೇರಲು ಅನುಮತಿಸಲಾಗಿದೆ".

ಕೇಂದ್ರ ಸಚಿವರ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಟಿಎಂಸಿ, ಈ ಆರೋಪಗಳು "ಆಧಾರರಹಿತ" ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT