ರಾಗಿಣಿ ನಾಯಕ್ 
ದೇಶ

ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ನಿವಾಸದಲ್ಲಿ ಕಳ್ಳತನ; ಬೆಳ್ಳಿಯ ವಿಗ್ರಹಗಳು ನಾಪತ್ತೆ!

ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ. ಕಳ್ಳತನದ ನಂತರ ಎರಡು ಬೆಳ್ಳಿಯ ಗಣೇಶನ, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ. 

ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ.

ಕಳ್ಳತನದ ನಂತರ ಎರಡು ಬೆಳ್ಳಿಯ ಗಣೇಶನ ವಿಗ್ರಹಗಳು, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ. ಮಾಹಿತಿ ಪಡೆದ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ನಾಯಕ್ ಅವರು ಇತ್ತೀಚೆಗಷ್ಟೇ ಅಶೋಕ್ ವಿಹಾರಕ್ಕೆ ಸ್ಥಳಾಂತರಗೊಂಡಿರುವುದು ಗಮನಾರ್ಹ. ಮೊದಲು ಅವರು ಕೇಶವ ಪುರಂನಲ್ಲಿ ವಾಸವಿದ್ದರು.

ನಾಯಕ್ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಸದ್ಯ, ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್