ನವದೆಹಲಿ: ಭಾನುವಾರ ಮುಂಜಾನೆ ನೈರುತ್ಯ ದೆಹಲಿಯ ಆರ್‌ಕೆ ಪುರಂ ಪ್ರದೇಶದಲ್ಲಿ ಇಬ್ಬರು ಮಹಿಳೆಯರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪ್ರಮುಖ ಆರೋಪಿ ಮತ್ತು ಆತನ ಸಹಚರರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂಬೇಡ್ಕರ್ ಬಸ್ತಿಯಲ್ಲಿ ತನ್ನ ಸಹೋದರಿಯರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಸಂತ್ರಸ್ತರ ಸಹೋದರನಿಂದ ಮುಂಜಾನೆ 4.40 ರ ಸುಮಾರಿಗೆ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ.
'ಸ್ವೀಕರಿಸಿದ ಮಾಹಿತಿ ಮೇರೆಗೆ, ನಮ್ಮ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿತು. ಈ ವೇಳೆ ಗುಂಡೇಟು ತಿಂದಿದ್ದ ಇಬ್ಬರು ಮಹಿಳೆಯರನ್ನು ಎಸ್‌ಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ವೇಳೆಗಾಗಲೇ ಅವರು ಸಾವಿಗೀಡಾಗಿದ್ದರು' ಎಂದು ತಿಳಿಸಿದ್ದಾರೆ.
ಮೃತರನ್ನು ಪಿಂಕಿ (30) ಮತ್ತು ಜ್ಯೋತಿ (29) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಇದ್ದಿದ್ದರೆ ದೆಹಲಿ ಅತ್ಯಂತ ಸುರಕ್ಷಿತವಾಗಿರುತ್ತಿತ್ತು: ಅರವಿಂದ ಕೇಜ್ರಿವಾಲ್
ಪ್ರಾಥಮಿಕ ತನಿಖೆಯಿಂದ ದಾಳಿಕೋರರು ಸಂತ್ರಸ್ತೆಯರ ಸಹೋದರನಿಗೆ ತಿಳಿದವರಾಗಿದ್ದು, ಘಟನೆಯ ಹಿಂದಿನ ಉದ್ದೇಶವು ಹಣದ ವಿವಾದ ಎಂದು ತೋರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಹೇಳಿದರು.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.