ಸಾಂದರ್ಭಿಕ ಚಿತ್ರ 
ದೇಶ

19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರಿಂದ ಅತ್ಯಾಚಾರ

ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೊರಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆ ದೆಹಲಿಯಲ್ಲಿ ಓದುತ್ತಿದ್ದು, ಗ್ವಾಲಿಯರ್‌ನಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ಬಂದಿದ್ದಳು ಎಂದು ಪೊಲೀಸ್ ಉಪ ಅಧೀಕ್ಷಕ ವಿಜಯ್ ಸಿಂಗ್ ಭಡೋರಿಯಾ ತಿಳಿಸಿದ್ದಾರೆ.

ಹನುಮಾನ್ ಶಂಕರ್ ಕಾಲೋನಿಯಲ್ಲಿರುವ ಆರೋಪಿಗಳ ನಿವಾಸದೆದುರು ಹಾದುಹೋಗುತ್ತಿದ್ದಾಗ ಸಂತ್ರಸ್ತೆಯನ್ನು ಮನೆಯ ಒಳಗೆ ಎಳೆದುಕೊಂಡಿದ್ದಾರೆ. ಬಳಿಕ ಇಬ್ಬರು ಸಹೋದರರು ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದರು.

ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳ ವಿರುದ್ಧ ಸೂಕ್ತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ