ಏರ್ ಇಂಡಿಯಾ ವಿಮಾನ 
ದೇಶ

ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಲಾಟೆ ಸೃಷ್ಟಿ: ವ್ಯಕ್ತಿಯ ಬಂಧನ

ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊಚ್ಚಿ: ಅಬುಧಾಬಿಯಿಂದ ಕೊಚ್ಚಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಕೇರಳದ 51 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಏರ್ ಇಂಡಿಯಾ ವಿಮಾನ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಆರೋಪಿ ಜಿಜಾನ್ ಜಾಕೋಬ್ ನನ್ನು ಬಂಧಿಸಲಾಗಿದೆ. ಏರ್‌ಲೈನ್ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ವ್ಯಕ್ತಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಆ ವ್ಯಕ್ತಿ ಮದ್ಯದ ಅಮಲಿನಲ್ಲಿದ್ದ ಶಂಕೆ ಇದೆ. ಕ್ಷುಲಕ ಕಾರಣಕ್ಕೆ ಸಹ-ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆಅವರು ಜಗಳವಾಡಿದ್ದರು ಎಂದು ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದರು. ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಎ) ಅಡಿಯಲ್ಲಿ ಜಾಕೋಬ್ ಬಂಧಿಸಲಾಗಿತ್ತು. ನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ನೆಡುಂಬಸ್ಸೆರಿ ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

SCROLL FOR NEXT