ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಚಲಿಸುವ ಆಟೋದಲ್ಲೇ ಮಹಿಳೆ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಚಲಿಸುತ್ತಿದ್ದ ಆಟೋರಿಕ್ಷಾದೊಳಗೆ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ನಂತರ ಅದೇ ಚಾಕುವಿನಿಂದ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಚಲಿಸುತ್ತಿದ್ದ ಆಟೋರಿಕ್ಷಾದೊಳಗೆ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ನಂತರ ಅದೇ ಚಾಕುವಿನಿಂದ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖೈರಾನಿ ರಸ್ತೆಯ ದತ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಸಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.

"ದೀಪಕ್ ಬೋರ್ಸೆ ಎಂಬ ವ್ಯಕ್ತಿ ಚಲಿಸುತ್ತಿದ್ದ ಆಟೋದಲ್ಲಿಯೇ ಪಂಚಶಿಲಾ ಜಾಮದಾರ್ ಎಂಬ ಮಹಿಳೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆ ವಾಹನದಿಂದ ಇಳಿದು ಸ್ವಲ್ಪ ದೂರದಲ್ಲಿ ಹೋಗಿ ಕೆಳಗೆ ಬಿದ್ದಿದ್ದಾರೆ. ಬೋರ್ಸ್ ಅದೇ ಹರಿತವಾದ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ" ಎಂದು ಅವರು ತಿಳಿಸಿದ್ದಾರೆ.

ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆರೋಪಿ ಚೇತರಿಸಿಕೊಳ್ಳುತ್ತಿದ್ದಾನೆ" ಎಂದು ಅವರು ಹೇಳಿದ್ದಾರೆ.

ಮಹಿಳೆ ಮತ್ತು ಆರೋಪಿಗಳು ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಆಟೋದಲ್ಲಿ ಇಬ್ಬರ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಬೋರ್ಸೆ ವಿರುದ್ಧ ಕೊಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!