ಉದ್ಧವ್ ಠಾಕ್ರೆ 
ದೇಶ

ಧೈರ್ಯವಿದ್ದರೆ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಲಿ: ಉದ್ಧವ್ ಠಾಕ್ರೆ

ಧೈರ್ಯವಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿ ಎಂದು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಮುಂಬೈ: ಧೈರ್ಯವಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿ ಎಂದು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಜೂನ್ 19 ರ ಪಕ್ಷದ ಸಂಸ್ಥಾಪನಾ ದಿನಾಚರಣೆಗೂ ಮುಂಚಿತವಾಗಿ ಮುಂಬೈನಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿರುವ ಠಾಕ್ರೆಯವರು, ನಮ್ಮ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ನಮ್ಮ ಪ್ರಧಾನಮಂತ್ರಿಗಳು ಉಪನ್ಯಾಸ ನೀಡಲು ಅಮೆರಿಗಾಗೆ ಭೇಟಿ ನೀಡುತ್ತಿದ್ದಾರೆ. ಅಮಿತ್ ಶಾ ಗೃಹ ಸಚಿವರಾಗಿಯೂ ವಿಫಲರಾಗಿದ್ದಾರೆ. ಅವರಿಗೆ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸಾಧ್ಯವಾಗಲಿಲ್ಲ. ಇಡಿ ಮತ್ತು ಸಿಬಿಐ ಅಧಿಕಾರಿಗಳ ತಂಡವನ್ನಾದರೂ ಕಳುಹಿಸಲಿ, ಅವರಿಂದಾದರೂ ಏನಾದರೂ ಸಹಾಯವಾಗುತ್ತದೆಯೇ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಹಿಂಸಾಚಾರ ಭುಗಿಲೆದ್ದಿದೆ. ಮೈತೇಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧವನ್ನು ಪ್ರಧಾನಿ ಮೋದಿ ನಿಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ. ಹಾಗಿದ್ದರೆ, ಮೋದಿ ಅವರು ಮಣಿಪುರದಲ್ಲಿ ಹಿಂಸಾಚಾರವನ್ನು ನಿಲ್ಲಿಸಬೇಕು, ಶಾಂತಿಯನ್ನು ಪುನಃಸ್ಥಾಪಿಸಬೇಕು. ಹಾಗೆ ಮಾಡಿದ್ದೇ ಆದರೆ, ಈ ರಷ್ಯಾ-ಉಕ್ರೇನ್ ಕುರಿತು ಹೇಳುತ್ತಿರುವ ಮಾತುಗಳನ್ನೂ ನಾವು ನಂಬುತ್ತೇವೆಂದು ಹೇಳಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧವೂ ಕಿಡಿಕಾರಿದ ಅವರು, ಜೂನ್ 20 ರಂದು 'ವಿಶ್ವ ದ್ರೋಹಿಗಳ ದಿನ' ಎಂದು ಆಚರಿಸಲಾಗುವುದು. ಅವರು ಮಾಡಿದ "ದ್ರೋಹ" ವನ್ನು ಎಂದಿಗೂ ಮರೆಯಲಾಗದು ಎಂದು ಹೇಳಿದರು.

ಇಂದು ನನ್ನ ಜೊತೆ ನನ್ನ ಪಕ್ಷದ ಯೋಧರಿಲ್ಲ. ಅವರೆಲ್ಲರೂ ನಿಷ್ಠಾವಂತರು ಹಾಗೂ ಬದ್ಧತೆಯುಳ್ಳವರಾಗಿದ್ದರು. ದೇಶದ್ರೋಹಿಗಳಿರುವ ದೊಡ್ಡ ಸೈನ್ಯವನ್ನು ಇಟ್ಟುಕೊಳ್ಳುವುದಕ್ಕಿಂತ ನಿಷ್ಠಾವಂತ ಸೈನಿಕರನ್ನು ಮುನ್ನಡೆಸುವುದು ಉತ್ತಮ. ಯುದ್ಧವು ನಿಷ್ಠೆ ಮತ್ತು ಬದ್ಧತೆಯ ಆಧಾರದ ಮೇಲೆ ಹೋರಾಡಲ್ಪಡುತ್ತದೆ ಎಂದು ತಿಳಿಸಿದರು.

ಏಕನಾಥ್ ಶಿಂಧೆ ಮತ್ತು 39 ಇತರ ಪಕ್ಷದ ಶಾಸಕರು ಆಗಿನ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ನಂತರ ಕಳೆದ ವರ್ಷ ಜೂನ್‌ನಲ್ಲಿ ಶಿವಸೇನೆ ವಿಭಜನೆಯಾಯಿತು.

ನಿಜವಾದ ಶಿವಸೇನೆ ನಮ್ಮದು. ನೀವು ಸಂಸದರು ಮತ್ತು ಶಾಸಕರನ್ನು ಕದ್ದಿರಬಹುದು. ಆದರೆ, ವಿಶ್ವಾಸಾರ್ಹ ಮತ್ತು ನಿಷ್ಠಾವಂತ ಬೆಂಬಲಿಗರನ್ನಲ್ಲ. ಶಿವಸೇನೆಯು ಆಡಳಿತವನ್ನು ಸಮರ್ಥವಾಗಿ ನಡೆಸಬಲ್ಲದು ಎಂದು ಜನರಿಗೆ ತೋರಿಸಿದೆ. ನಾನು ಮುಖ್ಯಮಂತ್ರಿ ಸ್ಥಾನವನ್ನು ಸವಾಲಾಗಿ ತೆಗೆದುಕೊಂಡಿದ್ದೇನೆ. ಇಂದು ನಾನು ನನ್ನವರನ್ನು ಭೇಟಿಯಾದಾಗ ಅವರು ನನ್ನನ್ನು ಪರಿಗಣಿಸುತ್ತಾರೆ. ನನ್ನನ್ನು ಅವರು ಕುಟುಂಬ ಸದಸ್ಯರೆಂದು ನೋಡುತ್ತಾರೆಂದು ತಿಳಿಸಿದರು.

ಇದೇ ವೇಳೆ ಮೋದಿ ಎಂದರೆ ಭಾರತ  ಎಂಬ ಶಿಂಧೆ ಹೇಳಿಕೆಯನ್ನು ಟೀಕಿಸಿದ ಅವರು, ರಾಷ್ಟ್ರಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ಹಿಟ್ಲರ್ ಹಾದಿಯಲ್ಲಿ ಸಾಗುತ್ತಿದೆ. ಆದರೆ, ಕ್ರಾಂತಿಕಾರಿಗಳಿಂದ ಸ್ಫೂರ್ತಿ ಪಡೆಯುವುದು ನಮ್ಮ ಕೆಲಸವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT