ನಂದನ್ ನೀಲೇಕಣಿ 
ದೇಶ

ಐಐಟಿ ಬಾಂಬೆಗೆ 315 ಕೋಟಿ ರೂ. ದೇಣಿಗೆ ನೀಡಿದ ನಂದನ್ ನಿಲೇಕಣಿ

ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಅವರು ತಾವು ಎಂಜಿನಿಯರಿಂಗ್ ಕಲಿತ ಐಐಟಿ ಬಾಂಬೆಗೆ 315 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಇದರೊಂದಿಗೆ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಗೆ ಹಳೆ ವಿದ್ಯಾರ್ಥಿ...

ಬೆಂಗಳೂರು: ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಅವರು ತಾವು ಎಂಜಿನಿಯರಿಂಗ್ ಕಲಿತ ಐಐಟಿ ಬಾಂಬೆಗೆ 315 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಇದರೊಂದಿಗೆ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಗೆ ಹಳೆ ವಿದ್ಯಾರ್ಥಿ ನಿಲೇಕಣಿ ನೀಡಿದ ಒಟ್ಟು ದೇಣಿಗೆ 400 ಕೋಟಿ ರೂ. ಗೆ ತಲುಪಿದೆ. ಈ ಹಿಂದೆ ಅವರು ಐಐಟಿ ಬಾಂಬೆ 85 ಕೋಟಿ ರೂ.ದೇಣಿಗೆ ನೀಡಿದ್ದರು.

ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆಯಲು 1973 ರಲ್ಲಿ ಐಐಟಿ ಬಾಂಬೆ ಸೇರಿದ್ದ 68 ವರ್ಷದ ನಿಲೇಕಣಿ ಅವರು, ತಾವು ಕಲಿತ ಕಾಲೇಜ್ ನೊಂದಿಗಿನ ಒಡನಾಟದ 50 ವರ್ಷಗಳ ನೆನಪಿಗಾಗಿ ಹೊಸ ದೇಣಿಗೆಯನ್ನು ನೀಡುತ್ತಿರುವುದಾಗಿ ಹೇಳಿದ್ದಾರೆ.

ಈ ಕೊಡುಗೆಯು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಸಿದ್ಧ ಸಂಸ್ಥೆಯಲ್ಲಿ ಟೆಕ್ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಪೋಷಿಸುತ್ತದೆ ಎಂದು ನಂದನ್ ನಿಲೇಕಣಿ ಅವರು ಟ್ವೀಟ್ ಮಾಡಿದ್ದಾರೆ.

ದೇಶದ ಹಳೆಯ ವಿದ್ಯಾರ್ಥಿ ನೀಡಿದ ಅತಿದೊಡ್ಡ ದೇಣಿಗೆಗಳಲ್ಲಿ ಒಂದಾಗಿರುವ ಈ ದೇಣಿಗೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಗಳಲ್ಲಿ ಜಾಗತಿಕ ನಾಯಕನಾಗಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಗಣನೀಯ ಕೊಡುಗೆ ನೀಡಲು ಐಐಟಿ- ಬಾಂಬೆಗೆ ಸಹಕಾರಿಯಾಗಲಿದೆ ಎಂದು ನಿಲೇಕಣಿ ಮತ್ತು ಐಐಟಿ ಬಾಂಬೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್