ಅಮೆರಿಕಕ್ಕೆ ತೆರಳಿದ ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ ಅಮೆರಿಕ ಭೇಟಿ: ರಕ್ಷಣೆ, ವ್ಯಾಪಾರ ಕ್ಷೇತ್ರವೇ ಕೇಂದ್ರಬಿಂದು

4 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕಕ್ಕೆ ಹಾರಿದ್ದು ರಕ್ಷಣೆ, ವ್ಯಾಪಾರ ಸೇರಿದಂತೆ ಹಲವು ವಿಚಾರಗಳ ಕುರಿತು ವಿವಿಧ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ನವದೆಹಲಿ: 4 ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕಕ್ಕೆ ಹಾರಿದ್ದು ರಕ್ಷಣೆ, ವ್ಯಾಪಾರ ಸೇರಿದಂತೆ ಹಲವು ವಿಚಾರಗಳ ಕುರಿತು ವಿವಿಧ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಹೌದು.. ಪ್ರಧಾನಿ ನರೇಂದ್ರ ಮೋದಿ ನಾಲ್ಕು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.  ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಒಳಗೊಂಡಿರಲಿದೆ ಎಂದು ತಿಳಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಅಮೆರಿಕದಲ್ಲಿ ಉದ್ಯಮಿಗಳನ್ನು, ಅನಿವಾಸಿ ಭಾರತೀಯರನ್ನು ಮೋದಿ ಭೇಟಿಯಾಗಲಿದ್ದಾರೆ. ವ್ಯಾಪಾರ, ವಾಣಿಜ್ಯ, ತಂತ್ರಜ್ಞಾನ, ನಾವೀನ್ಯತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ.

ಮುಂದಿನ ಮೂರು ದಿನಗಳ ಕಾಲ ಪ್ರಧಾನಿ ಮೋದಿಯವರ ವೇಳಾಪಟ್ಟಿಯು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನದಲ್ಲಿ ಅಪರೂಪದ ಭಾಷಣ, ವ್ಯಾಪಾರ ಮುಖಂಡರು ಮತ್ತು ಭಾರತೀಯ ವಲಸಿಗರೊಂದಿಗಿನ ಸಭೆಗಳು ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಶ್ವೇತಭವನದಲ್ಲಿ ಔತಣಕೂಟವನ್ನು ಒಳಗೊಂಡಿರುತ್ತದೆ. 

ವಿಶ್ವ ಯೋಗ ದಿನವಾದ ಬುಧವಾರ, ವಿಶ್ವಸಂಸ್ಥೆಯ ಕಟ್ಟಡದಲ್ಲಿ ಪ್ರಧಾನ ಮಂತ್ರಿ ಯೋಗ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ. ಶುಕ್ರವಾರ, ಅವರು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ಅಮೆರಿಕದ ವಲಸಿಗ ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದ ಗೋಲ್ಡನ್ ಗೇಟ್ ಸೇತುವೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಾವಿರಾರು ಭಾರತೀಯ-ಅಮೆರಿಕನ್ನರು ಅಮೆರಿಕಾದ್ಯಂತ ಐಕಾನಿಕ್ ಸ್ಥಳಗಳಲ್ಲಿ ಸಾಮೂಹಿಕವಾಗಿ ಸೇರಿ ಪ್ರಧಾನಿ ಮೋದಿಗೆ ಸ್ವಾಗತ ಸಂದೇಶಗಳನ್ನು ಕಳುಹಿಸಲು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅಮೆರಿಕಗೆ ಹೊರಡುತ್ತಿದ್ದೇನೆ. ಅಲ್ಲಿ ನಾನು ನ್ಯೂಯಾರ್ಕ್ ನಗರ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಿಗೆ ಹಾಜರಾಗುತ್ತೇನೆ. ಈ ಕಾರ್ಯಕ್ರಮಗಳಲ್ಲಿ ವಿಶ್ವಸಂಸ್ಥೆ ಪ್ರಧಾನ ಕಟೇರಿಯಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲ್ಲಿದ್ದೇನೆ. ಅಂತೆಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗಿನ ಮಾತುಕತೆ ನಡೆಸುತ್ತೇನೆ. ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಲಿದ್ದೇನೆ.

ಅಲ್ಲದೆ ಅಮೆರಿಕದಲ್ಲಿ ನಾನು ವಾಣಿಜ್ಯ ನಾಯಕರನ್ನು ಭೇಟಿ ಮಾಡಲಿದ್ದು, ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲು ಮತ್ತು ಜೀವನದ ವಿವಿಧ ಹಂತಗಳ ಚಿಂತನೆಯ ನಾಯಕರನ್ನು ಭೇಟಿ ಮಾಡಲು ಅವಕಾಶವನ್ನು ಪಡೆಯುತ್ತೇನೆ. ವ್ಯಾಪಾರ, ವಾಣಿಜ್ಯ, ನಾವೀನ್ಯತೆ, ತಂತ್ರಜ್ಞಾನ ಮತ್ತು ಅಂತಹ ಇತರ ಕ್ಷೇತ್ರಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಸಂಬಂಧಗಳನ್ನು ಗಾಢವಾಗಿಸಲು ನಾವು ಬಯಸುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT