ಸುಚೇತನಾ ಭಟ್ಟಾಚಾರ್ಯ 
ದೇಶ

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮೂಲಕ ಪುರುಷನಾಗಲು ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ ನಿರ್ಧಾರ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ತಾವು "ಟ್ರಾನ್ಸ್‌ಮ್ಯಾನ್" ಎಂದು ಘೋಷಿಸಿಕೊಂಡಿದ್ದು, ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ತಾವು "ಟ್ರಾನ್ಸ್‌ಮ್ಯಾನ್" ಎಂದು ಘೋಷಿಸಿಕೊಂಡಿದ್ದು, ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.

ಇತ್ತೀಚಿಗೆ ಎಲ್ ಜಿಬಿಟಿಕ್ಯೂ ಸಮುದಾಯದ ಜನರ ಜೀವನೋಪಾಯದ ಕುರಿತು ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಸುಚೇತನಾ ಅವರು, ನಾನು ಪುರುಷನಾಗಿ ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸುಚೇತನಾ ಅವರ ಚಿತ್ರವನ್ನು LGBTQ ಕಾರ್ಯಕರ್ತ ಸುಪ್ರವಾ ರಾಯ್ ಅವರ ಸಾಮಾಜಿಕ ಮಾಧ್ಯದಲ್ಲಿ ಪೋಸ್ಟ್‌ ಹಾಕಿದ ನಂತರ ಈ ವಿಷಯ ಮೊದಲು ಬಹಿರಂಗವಾಗಿದೆ.

ರಾಯ್ ಪ್ರಕಾರ, ವಿಚಾರ ಸಂಕಿರಣದಲ್ಲಿ ಸುಚೇತನಾ ಅವರು ತಾನು "ಟ್ರಾನ್ಸ್‌ಮ್ಯಾನ್" ಎಂದು ಘೋಷಿಸಿಕೊಂಡಿದ್ದರು ಮತ್ತು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಯ ನಂತರ 'ಅವರು ಸುಚೇತನ್' ಎಂದು ಕರೆಯಲ್ಪಡುವುದಾಗಿ ಹೇಳಿದ್ದರು.

ನಂತರ, ಸುಚೇತನಾ ಅವರು ಮಾಧ್ಯಮವೊಂದಕ್ಕೆ ಈ ವಿಚಾರವನ್ನು ಖಚಿತಪಡಿಸಿದ್ದು, ತಾವು 41 ವರ್ಷದ ವಯಸ್ಕ ವ್ಯಕ್ತಿಯಾಗಿದ್ದು, ಇದು ನನ್ನ ಸ್ವಂತ ನಿರ್ಧಾರವಾಗಿದ್ದು, ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ದಯವಿಟ್ಟು ಈ ವಿಚಾರದಲ್ಲಿ ನನ್ನ ಕುಟುಂಬವನ್ನು ಎಳೆಯಬೇಡಿ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆಗೆ ಹೋಗುವ ಮುನ್ನ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆಯೂ ಸುಚೇತನಾ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel