ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಒಂದು ಕುಟುಂಬದಂತೆ ಹೋರಾಡುತ್ತೇವೆ: ಪಾಟ್ನಾದಲ್ಲಿ ಲಾಲು ಭೇಟಿ ಬಳಿಕ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರನ್ನು ಪಾಟ್ನಾದಲ್ಲಿ ಭೇಟಿ...

ಲಾಲು ಭೇಟಿ ಮಾಡಿದ ಮಮತಾ ಬ್ಯಾನರ್ಜಿ
Lingaraj Badiger
Updated On : 22 Jun 2023, 7:23 pm

ಪಾಟ್ನಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರನ್ನು ಪಾಟ್ನಾದಲ್ಲಿ ಭೇಟಿ ಮಾಡಿದರು. 

ನಾಳೆ ನಿಗದಿಯಾಗಿರುವ ವಿರೋಧ ಪಕ್ಷದ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಪಾಟ್ನಾಗೆ ಆಗಮಿಸಿದ ಮಮತಾ ಬ್ಯಾನರ್ಜಿ, ಸಂಸದರಾಗಿರುವ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾದರು.

ಇದನ್ನು ಓದಿ: ನಾಳೆ ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆ: ಆರ್‌ಎಲ್‌ಡಿ ಗೈರು, ಬಿಎಸ್‌ಪಿಗಿಲ್ಲ ಆಹ್ವಾನ

Advertisement

Advertisement

ಲಾಲು ಭೇಟಿ ಬಳಿಕ ಮಾತನಾಡಿದ ಮಮತಾ, ಲಾಲು ಜಿ ಅವರನ್ನು ಭೇಟಿ ಮಾಡಿದ್ದಕ್ಕೆ ತುಂಬಾ ಖುಷಿಯಾಗಿದೆ. ಅವರು ಒಬ್ಬ ಹಿರಿಯ ನಾಯಕ. ಅವರನ್ನು ನೋಡಿದ ನಂತರ ಬಿಜೆಪಿ ವಿರುದ್ಧ ಹೋರಾಡಲು ಅವರು ಸಾಕಷ್ಟು ಪ್ರಬಲರಾಗಿದ್ದಾರೆ ಅನಿಸಿತು. ನಾವು ಒಂದು ಕುಟುಂಬದಂತೆ ಒಗ್ಗಟ್ಟಿನಿಂದ ಹೋರಾಡಲು ಇಲ್ಲಿಗೆ ಬಂದಿದ್ದೇವೆ ಎಂದರು.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ(ಯುನೈಟೆಡ್) ನಾಯಕ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement