ಸಂಗ್ರಹ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, 'ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ' ಎಂದಿದ್ದಾರೆ.

ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿಯೋಜನೆಗೊಂಡಿದ್ದ ಪಡೆಗಳು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ವೇಳೆ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ.

ಕಳೆದ ವಾರವೂ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಇಂತದ್ದೇ ಪ್ರಯತ್ನವನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಡೆದಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: ಸೋಲು ಬೆನ್ನಲ್ಲೇ ಟ್ರೋಫಿಯೊಂದಿಗೆ ಮೈದಾನ ತೊರೆದ ಪಾಕ್ ಸಚಿವ; ICCಗೆ ದೂರು ನೀಡಲು BCCI ಮುಂದು..!

Asia Cup 2025: ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ; ತಡರಾತ್ರಿ ದುಬೈನಲ್ಲಿ ಹೈಡ್ರಾಮಾ, ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!

ಭಾರತದಿಂದ ಔಷಧ ಆಮದಿಗೆ ಶೇ.100 ರಷ್ಟು ಸುಂಕ: US ಅಹಂಕಾರಕ್ಕೆ ಪೆಟ್ಟು; ಭಾರತಕ್ಕೆ ಶೂನ್ಯ ಸುಂಕದೊಂದಿಗೆ ಬಾಗಿಲು ತೆರೆದ ಚೀನಾ!

ಏಷ್ಯಾ ಕಪ್ 2025 ಫೈನಲ್: ಸೋಲಿನ ಹತಾಶೆ, ರನ್ನರ್-ಅಪ್ ಚೆಕ್ ಬಿಸಾಡಿ ಹೋದ ಪಾಕ್ ನಾಯಕ

Asia Cup 2025: champion ತಂಡಕ್ಕೆ ಟ್ರೋಫಿ ಕೊಡದಿದ್ದನ್ನು ಎಂದೂ ನೋಡಿಲ್ಲ, ನನ್ನ ತಂಡವೇ ನನಗೆ ಟ್ರೋಫಿ; ಸೂರ್ಯಕುಮಾರ್ ಯಾದವ್

SCROLL FOR NEXT