ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಭೇಟಿಯಾದ ಕೆ.ಹೆಚ್. ಮುನಿಯಪ್ಪ 
ದೇಶ

ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ: ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ: ಕೆ.ಹೆಚ್. ಮುನಿಯಪ್ಪ

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

ನವದೆಹಲಿ/ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಒದಗಿಸುವ 'ಅನ್ನಭಾಗ್ಯ' ಯೋಜನೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಜುಲೈ 1 ರಂದು ಯೋಜನೆ ಚಾಲನೆಗೊಳಿಸಲು ಸರ್ಕಾರ ಉದ್ದೇಶಿಸಿತ್ತು. ಆದರೆ, ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಿಸಿದ್ದು, ಯೋಜನೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.

ಈ ಸಂಬಂಧ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಹೆಚ್. ಮುನಿಯಪ್ಪ, ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಯಿತು. ಆದರೆ, ಸಚಿವರು 300 ಲಕ್ಷ ಟನ್ ಅಕ್ಕಿಯನ್ನು ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದ್ದು, ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಇದರಲ್ಲಿ ರಾಜಕೀಯ ದುರುದ್ದೇಶ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಎಷ್ಟೇ ಕಷ್ಟವಾದರೂ ಉಚಿತವಾಗಿ ಅಕ್ಕಿ ಕೊಡುತ್ತೇವೆ,  ನಮ್ಮದೇ ಆದ ದಾರಿ ಕಂಡುಕೊಳ್ಳುತ್ತೇವೆಏಜೆನ್ಸಿಗಳ ಮೂಲಕ ಅಕ್ಕಿ ಖರೀದಿಗೆ ಪ್ರಯತ್ನ ಮಾಡುತ್ತೇವೆ, ಈ ಬಗ್ಗೆ ಈ ವಾರದಲ್ಲಿ ತೀರ್ಮಾನವಾಗಲಿದೆ. ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮುನಿಯಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT