ಜೆ ಪಿ ನಡ್ಡಾ 
ದೇಶ

ಬಿಜೆಪಿಯೇತರ ಸರ್ಕಾರ ಇರುವ ಕಡೆ ಮದ್ಯ ಹಗರಣ ನಡೆಯುತ್ತವೆ: ಜೆ ಪಿ ನಡ್ಡಾ

ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ. 

ರಾಂಚಿ: ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ. 

ಜಾರ್ಖಂಡ್‌ ರಾಜ್ಯದ ಗಿರಿದಿಹ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ “ಸಂಪರ್ಕ್ ಸೇ ಸಮರ್ಥನ್” ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡಿರುವ ಸಾಧನೆಗಳನ್ನು ಉಲ್ಲೇಖಿಸಿ, ಇಂದು ಭಾರತ ಮಾತನಾಡುವಾಗ ಜಗತ್ತು ಕೇಳಿಸಿಕೊಳ್ಳುತ್ತಿರುವುದು ನಿಜವಾಗಿಯೂ ಸಂತೋಷವಾಗಿದೆ ಎಂದು ಹೇಳಿದರು.

ಕೆಲವು ರಾಜ್ಯ ಸರ್ಕಾರಗಳೊಂದಿಗೆ ಲಿಕ್ಕರ್ ನ ಸಂಬಂಧ ಏನು ಎಂಬುದೇ ಅರ್ಥವಾಗುವುದಿಲ್ಲ. ಬಿಜೆಪಿಯೇತರ ಸರ್ಕಾರ ಇರುವಲ್ಲೆಲ್ಲಾ ಮದ್ಯದ ಹಗರಣಗಳು ನಡೆಯುತ್ತವೆ. ಅದೇ ರೀತಿ ಅಕ್ರಮ ಗಣಿಗಾರಿಕೆ ಮತ್ತು ಹೇಮಂತ್ ಸೊರೆನ್ ಅವರ ಕೃಪಾಕಟಾಕ್ಷ ಜಾರ್ಖಂಡ್‌ನಲ್ಲಿ ಪರಸ್ಪರ ಬೇರ್ಪಡಿಸಲಾಗದಂತೆ ಸಂಬಂಧ ಹೊಂದಿವೆ ಎಂದು ಸಹ ಹೇಳಿದರು.

ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಅತಿದೊಡ್ಡ ಭೂ ಹಗರಣ ನಡೆದಿದೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ರಾಜ್ಯದಲ್ಲಿ ಬಾಂಗ್ಲಾದೇಶಿ ನುಸುಳುಕೋರರಿಗೆ ಹೇಮಂತ್ ಸೊರೆನ್ ಸರ್ಕಾರ ಆಶ್ರಯ ನೀಡಿದೆ ಎಂದರು. 

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಡ್ಡಾ, ಸೊರೇನ್ ಸರ್ಕಾರ ಅಂತ್ಯವಿಲ್ಲದ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವಾಗ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದರು. 

ಒಂದೆಡೆ, ನಮ್ಮ ಪ್ರಧಾನಿಯವರು ದೇಶದಲ್ಲಿ ಅಭಿವೃದ್ಧಿಯ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಆದರೆ ಇಲ್ಲಿ ಜೆಎಂಎಂ-ಕಾಂಗ್ರೆಸ್-ಆರ್ ಜೆಡಿ ಮೈತ್ರಿ ಸರ್ಕಾರವು ಅದನ್ನು ಹಿಂದಕ್ಕೆ ತಳ್ಳಲು ನೋಡುತ್ತಿದೆ ಎಂದರು. 

ಮೋದಿಜಿಯವರನ್ನು ಜಗತ್ತಿನ ಎಲ್ಲೆಡೆ ಹೊಗಳುತ್ತಾರೆ, ಆದರೆ ಕಾಂಗ್ರೆಸ್ಸಿಗರು ಅವರ ವೈಭವೀಕರಣವನ್ನು ಇಷ್ಟಪಡುವುದಿಲ್ಲ ಅಥವಾ ದೇಶದ ವೈಭವೀಕರಣವನ್ನು ಇಷ್ಟಪಡುವುದಿಲ್ಲ. ಕಳೆದ 9 ವರ್ಷಗಳ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿ, 2014 ರಲ್ಲಿ ಭಾರತದ ಆರ್ಥಿಕತೆಯು ವಿಶ್ವದಲ್ಲಿ 10 ನೇ ಸ್ಥಾನದಲ್ಲಿತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅದು 5 ನೇ ಸ್ಥಾನಕ್ಕೆ ಏರಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT