ಬಿಹಾರದಲ್ಲಿ ಕುಸಿದ ಮೇಲ್ಸೇತುವೆ 
ದೇಶ

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಮತ್ತೊಂದು ಮೇಲ್ಸೇತುವೆ ಕುಸಿತ

ಗಂಗಾ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದುಬಿದ್ದ ಘಟನೆ ನಡೆದ 3 ವಾರಗಳಲ್ಲಿ ಇಂಥಹದ್ದೇ ಮತ್ತೊಂದು ಘಟನೆ ನಡೆದಿದೆ.

ಪಾಟ್ನ: ಗಂಗಾ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದುಬಿದ್ದ ಘಟನೆ ನಡೆದ 3 ವಾರಗಳಲ್ಲಿ ಇಂಥಹದ್ದೇ ಮತ್ತೊಂದು ಘಟನೆ ನಡೆದಿದೆ. 

ಕಿಶನ್ ಗಂಜ್ ಜಿಲ್ಲೆಯಲ್ಲಿರುವ ಮೇಲ್ಸೇತುವೆ ಈಗ ಕುಸಿದುಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾಟ್ನಾದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಮೇಚಿ ನದಿಗೆ ಕಟ್ಟಲಾಗಿದ್ದ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಎನ್ಎಹೆಚ್ಐ ನ ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ. 

ಎನ್ ಹೆಚ್-327E  ಯಶಸ್ವಿಯಾಗಿ ಪೂರ್ಣಗೊಂಡಿದ್ದರೆ, ಕಿಶನ್ ಗಂಜ್- ಕಥಿಹಾರ್ ನಡುವೆ ಸಂಪರ್ಕ ಕಲ್ಪಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲು ಐವರು ಸದಸ್ಯರಿರುವ ತಜ್ಞರ ಸಮಿತಿ ನೇಮಕ ಮಾಡಲಾಗಿದೆ.

ಪೈಲಿಂಗ್ ಪ್ರಕ್ರಿಯೆ (piling process) ವೇಳೆ ಮಾನವ ದೋಷದಿಂದಾಗಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜೂ.04 ರಂದು ಖಗಾರಿಯಾ- ಭಗಲ್ ಪುರ ಜಿಲ್ಲೆಗೆ ಸಂಪರ್ಕ ಕಲ್ಪಿಸಬೇಕಿದ್ದ ಮೇಲ್ಸೇತುವೆಯೊಂದು ಕುಸಿದುಬಿದ್ದಿತ್ತು. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT