ಕಾರ್ಕಳದಲ್ಲಿ ತೆಲಂಗಾಣ ಸಚಿವರ ಕಾರು ಅಪಘಾತ 
ದೇಶ

ಕಾರ್ಕಳದಲ್ಲಿ ಕಾರು ಅಪಘಾತ: ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರು!

ಕರ್ನಾಟಕದ ಕಾರ್ಕಳದಲ್ಲಿ ಕಾರು ಅಪಘಾತ ಸಂಭವಿಸಿದ್ದು, ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ: ಕರ್ನಾಟಕದ ಕಾರ್ಕಳದಲ್ಲಿ ಕಾರು ಅಪಘಾತ ಸಂಭವಿಸಿದ್ದು, ತೆಲಂಗಾಣ ಸಚಿವ ರೋಹಿತ್ ರೆಡ್ಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿದ್ದಾಗ ಟಯರ್ ಸ್ಫೋಟಗೊಂಡು ಕಾರು ಮರಕ್ಕೆ ಡಿಕ್ಕಿಯಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ್ದು, ಸಚಿವ ರೋಹಿತ್ ರೆಡ್ಡಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದ ಮಿಯೂರ್ ಸಮೀಪದ ಮೂದರ್-ನಲ್ಲೂರು ಕ್ರಾಸ್ ಹತ್ತಿರ ಈ ಘಟನೆ ನಡೆದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್