ಮೃತಪಟ್ಟ ಮಹಿಳೆ. 
ದೇಶ

ದೆಹಲಿ ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್ ಶಾಕ್'ಗೆ ಮಹಿಳೆ ಬಲಿ!

ವಿದ್ಯುತ್ ಶಾಕ್ ನಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ನವದೆಹಲಿ: ವಿದ್ಯುತ್ ಶಾಕ್ ನಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5:30 ರ ಸುಮಾರಿಗೆ ಇಬ್ಬರು ಮಹಿಳೆಯರು, ಮೂವರು ಮಕ್ಕಳೊಂದಿಗೆ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ಶಾಕ್‍ನಿಂದ ಕುಸಿದುಬಿದ್ದಿದ್ದ ಮಹಿಳೆಯನ್ನು ಸ್ಥಳದಲ್ಲಿದ್ದ ಜನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ದಾರಿಯಲ್ಲಿ ನೀರು ನಿಂತಿತ್ತು. ಈ ವೇಳೆ ನೀರಿನ ಪಕ್ಕದಲ್ಲಿ ನಡೆದು ಹೋಗುವಾಗ ವಿದ್ಯುತ್ ಕಂಬಕ್ಕೆ ಕೈ ತಾಕಿದೆ. ಈ ವೇಳೆ ಮಹಿಳೆಗೆ ವಿದ್ಯುತ್ ಪ್ರವಹಿಸಿದೆ ಎಂದು ವರದಿಗಳು ತಿಳಿಸಿವೆ.

ಕಂಬದ ಕೆಳಭಾಗದಲ್ಲಿ ವಿದ್ಯುತ್ ತಂತಿಗಳಿದ್ದು, ಈ ತಂತಿಗಳ ಮೂಲಕ ವಿದ್ಯುತ್ ಹರಿದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

'ಅಶ್ಲೀಲ ಅಲ್ಲ..' 'ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ‘KD’ ಸಿನಿಮಾದ ಅಶ್ಲೀಲ ಹಾಡು; ‘ಸರ್ಸೆ ನಿನ್ನ ಸೆರಗ ಸರ್ಸೆ’ ಬ್ಯಾನ್!

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಕೇಸ್: ಬಿಜೆಪಿ ಮುಖಂಡ ಸೇರಿ 39 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

SCROLL FOR NEXT