ಜೈರಾಮ್ ರಮೇಶ್ 
ದೇಶ

ಅನ್ನಭಾಗ್ಯ 2.0: ಯೋಜನೆ ಅನುಷ್ಟಾನಕ್ಕೆ ಕೇಂದ್ರದಿಂದ ಅಡ್ಡಿ, ಕರ್ನಾಟಕದ ದೌರ್ಭಾಗ್ಯ ಎಂದ ಕಾಂಗ್ರೆಸ್!

ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್,  ಮೋದಿ ಸರ್ಕಾರ ಅನ್ನಭಾಗ್ಯ 2.0 ಯೋಜನೆಯನ್ನು ಹಾಳು ಮಾಡುತ್ತಿರುವುದು ಕರ್ನಾಟಕ ಜನತೆಯ ದೌರ್ಬಾಗ್ಯ ಎಂದಿದೆ.

ನವದೆಹಲಿ: ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್,  ಮೋದಿ ಸರ್ಕಾರ ಅನ್ನಭಾಗ್ಯ 2.0 ಯೋಜನೆಯನ್ನು ಹಾಳು ಮಾಡುತ್ತಿರುವುದು ಕರ್ನಾಟಕ ಜನತೆಯ ದೌರ್ಬಾಗ್ಯ ಎಂದಿದೆ.

ರಾಜ್ಯದ ಬಡವರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಮತ ಚಲಾಯಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಭಾನುವಾರ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜನವರಿ 1, 2023 ರಿಂದ ಮೇ 24, 2023ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕವೊಂದರಲ್ಲೇ ಎಲ್ಲಾ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್ ಗೆ ರೂ. 3,400 ದರದಲ್ಲಿ ಸಂಗ್ರಹಿಸಿದ ಶೇ.95ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶ ಇದು ಮೋದಿಜೀ ಅವರ ಆಶೀರ್ವಾದದಿಂದಲೇ ಆಗಿರಬೇಕು ಎಂದು ಟೀಕಿಸಿದ್ದಾರೆ. 

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆದರಿಕೆಯಂತೆ, ಮೋದಿ ಜೀ ಅವರು ಆಶೀರ್ವಾದವನ್ನು ಅತ್ಯಂತ ವೇಗದಲ್ಲಿ ಹಿಂತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಅನ್ನಭಾಗ್ಯ 2.0 ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ ಎಂದು ಜೈರಾಮ್ ರಮೇಶ್ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT