ಮಣಿಪುರ ಹಿಂಸಾಚಾರ 
ದೇಶ

ಮಣಿಪುರ ಹಿಂಸಾಚಾರ: ಇಂಟರ್ನೆಟ್ ನಿಷೇಧ ಜೂನ್ 30 ರವರೆಗೆ ವಿಸ್ತರಣೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ತಡೆಯಲು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಿ ಭಾನುವಾರ ರಾಜ್ಯ...

ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ತಡೆಯಲು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಿ ಭಾನುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಜನಾಂಗೀಯ ಘರ್ಷಣೆಗಳು ಮತ್ತು ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯದಲ್ಲಿ "ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ತಡೆಯಲು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 30 ರಂದು ಮಧ್ಯಾಹ್ನ 3 ರವರೆಗೆ ವಿಸ್ತರಿಸಲಾಗಿದೆ.

"ನಿರಂತರ ಅಶಾಂತಿ"ಯಿಂದಾಗಿ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

ಹಿಂಸಾಚಾರ, ದಾಳಿಗಳು ಮತ್ತು ಗುಂಡಿನ ಚಕಮಕಿ ಸೇರಿದಂತೆ ಮನೆ ಮತ್ತು ಆವರಣಗಳಿಗೆ ಬೆಂಕಿ ಹಚ್ಚುವ ಘಟನೆಗಳು ಇನ್ನೂ ವರದಿಯಾಗುತ್ತಿವೆ ಎಂದು ಮಣಿಪುರದ ಪೊಲೀಸ್ ಮಹಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಕೆಲವು ಸಮಾಜ ವಿರೋಧಿ ಶಕ್ತಿಗಳು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣ ಮತ್ತು ದ್ವೇಷದ ವಿಡಿಯೋ ಸಂದೇಶಗಳ ಪ್ರಸಾರಕ್ಕಾಗಿ ವ್ಯಾಪಕವಾಗಿ ಬಳಸಬಹುದೆಂಬ ಆತಂಕವಿದೆ. ಇದು ಸಾರ್ವಜನಿಕರನ್ನು ಪ್ರಚೋದಿಸುತ್ತದೆ. ಹೀಗಾಗಿ ಇಂಟರ್ನೆಟ್ ನಿಷೇಧ ವಿಸ್ತರಿಸಲಾಗಿದೆ" ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT