ನವದೆಹಲಿ: ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.
ಸಂವಿಧಾನ ,ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಸೋಲಿಸುವುದು ಎಡ ಪಕ್ಷಗಳಿಗೆ ಮಾತ್ರವಲ್ಲ, ಎಲ್ಲಾ ಜಾತ್ಯತೀತ ಪಕ್ಷಗಳಿಗೆ ಪ್ರಾಥಮಿಕ ಉದ್ದೇಶವಾಗಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತಂತ್ರ, ಮೈತ್ರಿ, ಸೀಟು ಹಂಚಿಕೆಯ ಪ್ರಶ್ನೆಯನ್ನು ರಾಜ್ಯ ಮಟ್ಟದಲ್ಲಿ ವ್ಯವಹರಿಸಬೇಕು, ಪ್ರತಿ ರಾಜ್ಯದಲ್ಲಿನ ರಾಜಕೀಯ ಶಕ್ತಿಗಳ ಸಮತೋಲನವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ"
ಇದನ್ನೇ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ ಹೇಳಿದೆ ಎಂದರು.
"ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಒಂದೇ ಆಗಿಲ್ಲ. ರಾಜ್ಯದಿಂದ ರಾಜ್ಯಕ್ಕೆ ಪರಿಸ್ಥಿತಿ ಬದಲಾಗುತ್ತದೆ, ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಸೋಲಿಸುವುದು ಎಂಬುದು ಕಾರ್ಯತಂತ್ರವಾಗಬೇಕು ಎಂದು ಅವರು ತಿಳಿಸಿದರು.