ಸಿದ್ದರಾಮಯ್ಯ 
ದೇಶ

ಅಹಲ್ಯಾದೇವಿ ಹೋಳ್ಕರ್‌ರ 298ನೇ ಜನ್ಮದಿನಾಚರಣೆ: ಇಂದೋರ್‌ನಲ್ಲಿ ಕನ್ನಡದಲ್ಲಿಯೇ ಭಾಷಣ ಮಾಡಿದ ಸಿದ್ದರಾಮಯ್ಯ

ಮಹಿಳೆಯರಿಗೆ ಶಿಕ್ಷಣ ನೀಡಿ ಆರ್ಥಿಕವಾಗಿ ಸ್ವಾವಲಂಬಿಯಾಗುವಂತೆ ಮಾಡುವುದು ಇಂದೋರ್ ರಾಜ್ಯದ 18ನೇ ಶತಮಾನದ ಪೌರಾಣಿಕ ಆಡಳಿತಗಾರ್ತಿ ಅಹಲ್ಯಾದೇವಿ ಹೋಳ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಬಾರಾಮತಿ: ಮಹಿಳೆಯರಿಗೆ ಶಿಕ್ಷಣ ನೀಡಿ ಆರ್ಥಿಕವಾಗಿ ಸ್ವಾವಲಂಬಿಯಾಗುವಂತೆ ಮಾಡುವುದು ಇಂದೋರ್ ರಾಜ್ಯದ 18ನೇ ಶತಮಾನದ ಪೌರಾಣಿಕ ಆಡಳಿತಗಾರ್ತಿ ಅಹಲ್ಯಾದೇವಿ ಹೋಳ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಹೋಳ್ಕರ್ ಅವರ 298ನೇ ಜನ್ಮದಿನಾಚರಣೆ ಅಂಗವಾಗಿ ಪುಣೆ ಜಿಲ್ಲೆಯ ಬಾರಾಮತಿ ಪಟ್ಟಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡದಲ್ಲಿಯೇ ಭಾಷಣ ಮಾಡಿದ ಸಿದ್ದರಾಮಯ್ಯ ಅವರು, ಹೋಳ್ಕರ್ ಅವರ ಜೀವನ ಮತ್ತು ಸಮಯವನ್ನು ನೆನಪಿಸಿಕೊಂಡರು. ಮಹಿಳೆಯರಿಗೆ ಶಿಕ್ಷಣ ನೀಡಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದೇ ಅಹಲ್ಯಾದೇವಿ ಹೋಳ್ಕರ್ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದರು.

'ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸುವ ಮೂಲಕ ಈ ಗುರಿಯನ್ನು ಸಾಧಿಸಲು ನಾವು ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಅಲ್ಲದೆ, ಕುಟುಂಬದ ಮುಖ್ಯಸ್ಥೆಯಾಗಿರುವ ಮಹಿಳೆಯರ ಬ್ಯಾಂಕ್ ಖಾತೆಗೆ ತಿಂಗಳಿಗೆ 2,000 ರೂ. ಹಾಕುತ್ತೇವೆ ಎಂದರು.

ಕರ್ನಾಟಕ ಸಿಎಂ ಅವರು ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆಯನ್ನು ಜಾರಿಗೆ ತಂದರು. ಆದರೆ, ಈ ವರ್ಷ ಆಗಸ್ಟ್ 15 ರಿಂದ ತಿಂಗಳಿಗೆ 2,000 ರೂ. ಖಾತೆಗೆ ಹಾಕುವ ಭರವಸೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಜಯಗಳಿಸಲಿದೆ ಎಂದ ಅವರು, ರಾಜ್ಯದಲ್ಲಿ ಮಹಿಳೆಯರಿಗೆ ಈ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಅವರ ಪುತ್ರಿ ಮತ್ತು ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT