ದೇಶ

70 ಕೋಟಿ ರೂ. ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರ ಬಂಧನ?

Nagaraja AB

ಇಂದೋರ್:  2021 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 70 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡು ವರ್ಷಗಳ ಕಾಲ ಪರಾರಿಯಾಗಿದ್ದ ಬಿಲಾಲ್ ಖಾನ್ ಅವರನ್ನು ಗ್ವಾಲಿಯರ್‌ನ ಛೋಟಿ ಗ್ವಾಲ್ಟೋಲಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ನಿಮಿಶ್ ಅಗರವಾಲ್ ಸುದ್ದಿಗಾರರಿಗೆ ತಿಳಿಸಿದರು.

ಖಾನ್‌ಗೆ ಅಂತರ-ರಾಜ್ಯ ಮಾದಕ ದ್ರವ್ಯ ಕಳ್ಳಸಾಗಣೆ ದಂಧೆಯ ಜಾಲದೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಲಾಗಿದ್ದು, ಆತನ ಬಂಧನಕ್ಕೆ ಈ ಹಿಂದೆ 4,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ಡಿಸಿಪಿ ತಿಳಿಸಿದ್ದಾರೆ.
ಈ ಮಧ್ಯೆ ಬಜರಂಗದಳ ಜೂನ್ 15 ರಂದು ಡ್ರಗ್ ಮಾಫಿಯಾ ವಿರುದ್ಧ ಇಂದೋರ್‌ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಖಾನ್ ಅವರನ್ನು ಬಂಧಿಸುವಂತೆ ಕೋರಿತ್ತು ಎಂದು ಸಂಘಟನೆಯ ಸ್ಥಳೀಯ ಸಂಚಾಲಕ ತನ್ನು ಶರ್ಮಾ ತಿಳಿಸಿದ್ದಾರೆ.  

ಖಾನ್  ಮಾಜಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರೂ ಆಗಿದ್ದ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರ ಪುತ್ರ ಎಂದು ಶರ್ಮಾ ಹೇಳಿದ್ದಾರೆ. ಪೊಲೀಸರ ಪ್ರಕಾರ, ಜನವರಿ 5, 2021 ರಂದು, ಇಂದೋರ್‌ನಲ್ಲಿ ಸಾಗಿಸಲಾಗುತ್ತಿದ್ದ  70 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ.

SCROLL FOR NEXT