ಆದಿಪುರುಷ ಚಿತ್ರದಲ್ಲಿ ಪ್ರಭಾಸ್, ಸೈಫ್ ಆಲಿಖಾನ್ 
ದೇಶ

ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು 'ಆದಿಪುರುಷ' ವಿರುದ್ಧದ ಅರ್ಜಿಗಳ ವಿಚಾರಣೆ

ಇತ್ತೀಚಿಗೆ ತೆರೆಕಂಡ ಪ್ರಭಾಸ್ ಅಭಿನಯದ 'ಆದಿಪುರುಷ' ಚಿತ್ರದ ವಿರುದ್ಧದ ಅರ್ಜಿಗಳ ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ.

ಅಲಹಾಬಾದ್:ಇತ್ತೀಚಿಗೆ ತೆರೆಕಂಡ ಪ್ರಭಾಸ್ ಅಭಿನಯದ 'ಆದಿಪುರುಷ' ಚಿತ್ರದ ವಿರುದ್ಧದ ಅರ್ಜಿಗಳ ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ. ವಿವಿಧ ಅಂಶಗಳಲ್ಲಿ ಈ ಸಿನಿಮಾಕ್ಕೆ ಸಂಬಂಧಿಸಿದ ಆಕ್ಷೇಪಣೆ ಎತ್ತಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಲಕ್ನೋ ಹೈಕೋರ್ಟ್ ಪೀಠ ಸೋಮವಾರ ಅನುಮತಿಸಿತ್ತು.

 ಚಿತ್ರದ ಸಂಭಾಷಣೆ, ಬರಹಗಾರ ಮನೋಜ್ ಮುಂತಶಿರ್ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ಸಲ್ಲಿಸಲಾಗಿರುವ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಲಿದೆ. ಈ ಮಧ್ಯೆ  ಜನವರಿ 10 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪೀಠವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ನೋಟಿಸ್ ನೀಡಿತ್ತು. ಈ ಮಧ್ಯೆ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಮತ್ತೊಂದು ಪಿಐಎಲ್ ಸಲ್ಲಿಕೆಯಾಗಿದೆ.

ನವೀನ್ ಧವನ್ ಅವರ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ. ರಾಮಾಯಣ ಮಹಾಕಾವ್ಯ ಆಧಾರಿತ ಆದಿಪುರುಷ ಚಿತ್ರದಲ್ಲಿನ ಸಂಭಾಷಣೆ, ಆಡುಮಾತಿನ ಭಾಷೆ ಮತ್ತು ಕೆಲವು ಪಾತ್ರಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾಗಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT