ಸಾಂದರ್ಭಿಕ ಚಿತ್ರ 
ದೇಶ

ಟೊಮೆಟೊ ಬೆಲೆ ಏರಿಕೆ ತಾತ್ಕಾಲಿಕ, ಶೀಘ್ರದಲ್ಲೇ ದರ ಇಳಿಕೆಯಾಗಲಿದೆ: ಕೇಂದ್ರ

ದೇಶದ ಪ್ರಮುಖ ನಗರಗಳಲ್ಲಿ ಟೊಮೇಟೊ ಬೆಲೆ 100 ರೂಪಾಯಿಗೂ ಹೆಚ್ಚಾಗಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ...

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಟೊಮೇಟೊ ಬೆಲೆ 100 ರೂಪಾಯಿಗೂ ಹೆಚ್ಚಾಗಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. 

"ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ. ಹಠಾತ್ ಮಳೆ ಬೀಳುವ ಪ್ರದೇಶಗಳಲ್ಲಿ ಟೊಮೇಟೊ ಸಾಗಾಟದ ಮೇಲೆ ಪರಿಣಾಮ ಬೀರುತ್ತದೆ. ಇದು ತಾತ್ಕಾಲಿಕ ಸಮಸ್ಯೆ. ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆಯಾಗಲಿದೆ. ಈ ಸಮಯದಲ್ಲಿ ಪ್ರತಿ ವರ್ಷ ಟೊಮೆಟೊ ಬೆಲೆ ಏರಿಕೆಯಾಗುತ್ತದೆ" ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.

ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಸದ್ಯ ಶತಕದ ಗಡಿ ದಾಟಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟೊಮ್ಯಾಟೋ ಬೆಲೆ ನೂರು ರೂಪಾಯಿ ಮುಟ್ಟಿದೆ. ಕಳೆದ ವಾರ 40-50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮ್ಯಾಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ.

ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು ಚೆನ್ನೈನಲ್ಲಿ ಕೆಜಿಗೆ 67 ರೂ. ಇದೆ.

ಇತರ ಪ್ರಮುಖ ನಗರಗಳ ಪೈಕಿ ಬೆಂಗಳೂರಿನಲ್ಲಿ ಟೊಮೆಟೊ ಕೆಜಿಗೆ 52 ರೂ., ಜಮ್ಮುವಿನಲ್ಲಿ 80 ರೂ., ಲಖನೌದಲ್ಲಿ ಕೆಜಿಗೆ ರೂ. 60, ಶಿಮ್ಲಾದಲ್ಲಿ ರೂ. 88, ಭುವನೇಶ್ವರದಲ್ಲಿ ರೂ. 100 ಮತ್ತು ರಾಯ್ಪುರದಲ್ಲಿ ರೂ. 99 ರೂಪಾಯಿ.

ಇಲಾಖೆಯ ಅಂಕಿಅಂಶಗಳ ಪ್ರಕಾರ ಗೋರಖ್‌ಪುರ(ಉತ್ತರ ಪ್ರದೇಶ) ಮತ್ತು ಬಳ್ಳಾರಿ(ಕರ್ನಾಟಕ)ಯಲ್ಲಿ ಅತಿ ಹೆಚ್ಚು ಅಂದರೆ ಕೆಜಿಗೆ 122 ರೂಪಾಯಿಗೆ ಟೊಮೆಟೊ ಮಾರಾಟವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್