ದೇಶ

ಮುಂಬೈನಲ್ಲಿ ಭಾರೀ ಮಳೆ, ಮರ ಬಿದ್ದು ಇಬ್ಬರು ಸಾವು

Lingaraj Badiger

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು,  ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಬೃಹನ್ ಮುಂಬೈ ಮಹಾನಗರ ಪಾಲಿಕೆ(BMC)ಯ ವರದಿಯ ಪ್ರಕಾರ, ಉತ್ತರ ಮುಂಬೈನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6ರ ನಡುವೆ 100 ಮಿಮೀ ಗಿಂತ ಹೆಚ್ಚು ಮಳೆಯಾಗಿದೆ.

ಪಕ್ಕದ ಥಾಣೆಯಲ್ಲಿ, ಮಂಗಳವಾರ ಸಂಜೆ ಒಂದು ಅಂತಸ್ತಿನ 'ಚಾಲ್'(ಹಳೆಯ ವಠಾರ)ನ ಒಂದು ಭಾಗ ಕುಸಿದು 36 ವರ್ಷದ ಮಹಿಳೆ ಗಾಯಗೊಂಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದ್ದು, ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಮುಂಬೈನಲ್ಲಿ ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

SCROLL FOR NEXT