ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನ: ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಗಳಲ್ಲಿ 2ನೇ ಸಾವು, 2 ತಿಂಗಳಲ್ಲಿ 9ನೇ ಘಟನೆ, ವರ್ಷದಲ್ಲಿ 14ನೇ ಪ್ರಕರಣ

ರಾಜಸ್ಥಾನದಲ್ಲಿ ಮತ್ತೊಂದು ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದು, 24 ಗಂಟೆಗಳಲ್ಲಿ ಇದು 2ನೇ ಸಾವಾಗಿದೆ. ಅಂದೆಯೇ ಕೇವಲ ಎರಡು ತಿಂಗಳಲ್ಲಿ 9ನೇ ಘಟನೆ ಇದಾಗಿದ್ದು, ವರ್ಷದಲ್ಲಿ 14ನೇ ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ.

ಜೈಪುರ: ರಾಜಸ್ಥಾನದಲ್ಲಿ ಮತ್ತೊಂದು ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದು, 24 ಗಂಟೆಗಳಲ್ಲಿ ಇದು 2ನೇ ಸಾವಾಗಿದೆ. ಅಂದೆಯೇ ಕೇವಲ ಎರಡು ತಿಂಗಳಲ್ಲಿ 9ನೇ ಘಟನೆ ಇದಾಗಿದ್ದು, ವರ್ಷದಲ್ಲಿ 14ನೇ ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ.

24 ಗಂಟೆಗಳ ಅವಧಿಯಲ್ಲಿ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಇಬ್ಬರು ಎಂಬಿಬಿಎಸ್ ಆಕಾಂಕ್ಷಿಗಳು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ಘಟನೆಯಲ್ಲಿ, ಉದಯಪುರದ 18 ವರ್ಷದ ವೈದ್ಯಕೀಯ ಆಕಾಂಕ್ಷಿ ಮಂಗಳವಾರ ಬೆಳಿಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಪೊಲೀಸರ ಪ್ರಕಾರ, ಮೆಹುಲ್ ವೈಷ್ಣವ್ ಎಂದು ಗುರುತಿಸಲಾದ ವಿದ್ಯಾರ್ಥಿಯು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದರು. ಘಟನಾ ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ಮೆಹುಲ್ ಉದಯಪುರ ಜಿಲ್ಲೆಯ ಸಾಲುಂಬಾರ್ ನಿವಾಸಿಯಾಗಿದ್ದು, ಕಳೆದ ಎರಡು ತಿಂಗಳಿನಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನೀಟ್ ಗೆ ತಯಾರಿ ನಡೆಸುತ್ತಿದ್ದ. ವಿಜ್ಞಾನನಗರ ಪ್ರದೇಶದ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ. ಘಟನೆಯ ಸಮಯದಲ್ಲಿ, ಮೆಹುಲ್ ತನ್ನ ಹಾಸ್ಟೆಲ್ ರೂಮಿನಲ್ಲಿ ಒಬ್ಬನೇ ಇದ್ದನು, ಏಕೆಂದರೆ ಆ ರಾತ್ರಿ ಅವನ ರೂಮ್ಮೇಟ್ ಹೊರಗಿದ್ದರು. ಗಂಟೆಗಳು ಕಳೆದರೂ ಮೆಹುಲ್ ತನ್ನ ಕೊಠಡಿಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ಆತನ ಹಾಸ್ಟೆಲ್ ಮೇಟ್ ಗಳು ಕೇರ್ ಟೇಕರ್ ಗೆ ಮಾಹಿತಿ ನೀಡಿದ್ದಾರೆ. ಕೇರ್ ಟೇಕರ್ ಬಾಗಿಲು ಒಡೆದ ನಂತರ ಮೆಹುಲ್ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ಕೋಚಿಂಗ್ ವಿದ್ಯಾರ್ಥಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಯನ್ನು ಆದಿತ್ಯ ಎಂದು ಗುರುತಿಸಲಾಗಿದ್ದು, ಆತ ಸುಮಾರು ಎರಡು ತಿಂಗಳ ಹಿಂದೆ ಕೋಟಾ ನಗರಕ್ಕೆ ಬಂದಿದ್ದ. 

2 ತಿಂಗಳಲ್ಲಿ 9ನೇ ಘಟನೆ, ವರ್ಷದಲ್ಲಿ 14ನೇ ಪ್ರಕರಣ
ಕಳೆದ ಎರಡು ತಿಂಗಳಲ್ಲಿ ಕೋಟಾ ಜಿಲ್ಲೆಯಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮೇ ತಿಂಗಳಲ್ಲಿ ಐದು ಮತ್ತು ಜೂನ್ ನಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ. ಈ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಕೋಟಾದಲ್ಲಿ ಇದುವರೆಗೆ 14 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022 ರಲ್ಲಿ, ಕೋಟಾದಲ್ಲಿ ಕನಿಷ್ಠ 15 ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT