ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಟ್ರಕ್​ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿಗಳು; ಐವರು ಸಜೀವ ದಹನ

ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.

ಭೀಕರ ಅಪಘಾತದಲ್ಲಿ ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ಟ್ರಕ್‌ಗಳು ಹೊತ್ತಿ ಉರಿದಿದ್ದು, ಹನ್ನೆರಡು ಜಾನುವಾರು ಸಹ ಸಜೀವ ದಹನಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ಗ್ರಾಮಾಂತರದ ದುಡು ಪ್ರದೇಶದಲ್ಲಿ ಇಂದು ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಟ್ರಕ್ ಡಿಕ್ಕಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅದು ಎಲ್ಲಾ ಮೂರು ಟ್ರಕ್‌ಗಳಿಗೂ ಆವರಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಜೈಪುರ ಗ್ರಾಮಾಂತರ) ದಿನೇಶ್ ಶರ್ಮಾ ತಿಳಿಸಿದ್ದಾರೆ.

ಒಂದು ಟ್ರಕ್‌ನ ಚಾಲಕ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮೃತರನ್ನು ಹರ್ಯಾಣದ ಮೂವರು ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಇಬ್ಬರು - ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.

"ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT