ದೇಶ

ಸೋಲಾಪುರ: 'ಲವ್ ಪಾಕ್' ಎಂಬ ಸಂದೇಶವಿರುವ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Lingaraj Badiger

ಸೋಲಾಪುರ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ 'ಲವ್ ಪಾಕಿಸ್ತಾನ್' ಎಂಬ ಸಂದೇಶವಿರುವ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗುರುವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಟ್ಗಿ ರಸ್ತೆಯಲ್ಲಿರುವ ಶಾ ಆಲಂಗೀರ್ ಈದ್ಗಾದ ಹೊರಗೆ ಬಲೂನ್ ಗಳನ್ನು ಮಾರಾಟ ಮಾಡುತ್ತಿದ್ದರು. ಈದ್ ಉಲ್ ಅಧಾ ಆಚರಣೆಗಾಗಿ ಇಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲಿದ್ದ ಮುಸ್ಲಿಂ ಸಮುದಾಯದ ಕೆಲವರು ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಬಿಜಾಪುರ ನಾಕಾ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಆರೋಪಿಗಳು ಧ್ವಜಗಳು ಮತ್ತು ಬಲೂನ್‌ಗಳಂತಹ ಸಣ್ಣ ಸಣ್ಣ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಜೀವನ ನಡೆಸುತ್ತಿದ್ದಾರೆ. ಆದರೆ ಅವರಿಗೆ ಪ್ರಚೋದನಕಾರಿ ಸಂದೇಶವಿರುವ ಈ ಬಲೂನ್‌ಗಳನ್ನು ಯಾರು ಸರಬರಾಜು ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT