ಸಾಂದರ್ಭಿಕ ಚಿತ್ರ 
ದೇಶ

ಆಫೀಸಲ್ಲಿ ನೋ ಜೀನ್ಸ್-ಟೀ ಶರ್ಟ್ಸ್, ಕೇವಲ ಫಾರ್ಮಲ್ ಡ್ರೆಸ್: ಬಿಹಾರ ಶಿಕ್ಷಣ ಇಲಾಖೆ ಆದೇಶ

ಕೆಲಸದ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಬಾರದು ಎಂದು ಬಿಹಾರ ಸರ್ಕಾರವು ರಾಜ್ಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಆದೇಶ ಹೊರಡಿಸಿದೆ.

ಪಾಟ್ನಾ: ಕೆಲಸದ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಬಾರದು ಎಂದು ಬಿಹಾರ ಸರ್ಕಾರವು ರಾಜ್ಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆ ನಿರ್ದೇಶಕರು (ಆಡಳಿತ) ಆದೇಶದಲ್ಲಿ, ಟಿ-ಶರ್ಟ್ ಮತ್ತು ಜೀನ್ಸ್‌ನಲ್ಲಿ ಕಚೇರಿಗಳಿಗೆ ಬರುವ ನೌಕರರ ಬಗ್ಗ ಆಕ್ಷೇಪ ಎತ್ತಿದೆ.

‘‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಕಚೇರಿ ಸಂಸ್ಕೃತಿಗೆ ವಿರುದ್ಧವಾದ ವೇಷಭೂಷಣ ಧರಿಸಿ ಕಚೇರಿಗಳಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಕಚೇರಿಯಲ್ಲಿ ಅಧಿಕಾರಿಗಳು ಅಥವಾ ಇತರೆ ನೌಕರರು ಈ ರೀತಿಯ ಬಟ್ಟೆಗಳನ್ನು ಧರಿಸುವುದು ಕಚೇರಿಯಲ್ಲಿನ ಕಾರ್ಯ ಸಂಸ್ಕೃತಿಗೆ ವಿರುದ್ಧವಾಗಿದೆ. ಆದ್ದರಿಂದ ಎಲ್ಲ ಅಧಿಕಾರಿಗಳು ಮತ್ತು ಉದ್ಯೋಗಿಗಳು ಶಿಕ್ಷಣ ಇಲಾಖೆ ಕಚೇರಿಗಳಿಗೆ ಔಪಚಾರಿಕ ಉಡುಗೆಯಲ್ಲಿ(Formal deress code) ಮಾತ್ರ ಬರಬೇಕು, ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಯಾವುದೇ ಕ್ಯಾಶುಯಲ್ ಡ್ರೆಸ್‌ಗಳು, ವಿಶೇಷವಾಗಿ ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು(Casual outfit) ಧರಿಸಲು ಅನುಮತಿ ನೀಡುವುದಿಲ್ಲ'' ಎಂದು ಹೊರಡಿಸಿರುವ ಆದೇಶ ಪ್ರತಿಗಳು ಸುದ್ದಿಸಂಸ್ಥೆಗೆ ಲಭ್ಯವಾಗಿದೆ.

ಈ ಬಗ್ಗೆ ಕೇಳೋಣವೆಂದರೆ ಪ್ರತಿಕ್ರಿಯೆಗೆ ಬಿಹಾರ ಶಿಕ್ಷಣ ಸಚಿವ ಚಂದ್ರ ಶೇಖರ್ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಇಲ್ಲಿ ಉಲ್ಲೇಖಿಸಬೇಕಾದ ವಿಷಯವೆಂದರೆ ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಳೆದ ಏಪ್ರಿಲ್‌ನಲ್ಲಿ ಎಲ್ಲಾ ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಿಕೊಂಡು ಬರಬಾರದೆಂದು ಸುತ್ತೋಲೆ ಹೊರಡಿಸಿದ್ದರು. ಔಪಚಾರಿಕ ಉಡುಪುಗಳನ್ನು ಮಾತ್ರ ಕಚೇರಿಗೆ ಧರಿಸಿಕೊಂಡು ಬಂದು ಕುತ್ತಿಗೆಗೆ ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸುವಂತೆ ಸೂಚಿಸಿದ್ದರು. 

ಬಿಹಾರ ಸರ್ಕಾರವು 2019 ರಲ್ಲಿ ರಾಜ್ಯ ಸಚಿವಾಲಯದಲ್ಲಿ ಯಾವುದೇ ಶ್ರೇಣಿಯ, ಹುದ್ದೆಯ ನೌಕರರು ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಬಾರದೆಂದು ಆದೇಶ ಹೊರಡಿಸಿತ್ತು. 

ಕಚೇರಿಯ ಸಂಸ್ಕೃತಿ, ಘನತೆ-ಗೌರವಗಳನ್ನು ಕಾಪಾಡುವುದು ಇದರ ಉದ್ದೇಶವಾಗಿತ್ತು. ರಾಜ್ಯ ಸಚಿವಾಲಯದ ನೌಕರರು ಕಚೇರಿಯಲ್ಲಿ ಸರಳ, ಆರಾಮದಾಯಕ ಮತ್ತು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT