ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಹುಲಿ ದಾಳಿಗೆ ವ್ಯಕ್ತಿ ಬಲಿ; ಅರಣ್ಯ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರ ದಾಳಿ

ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಬಾಂದ್ರಾ: ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಗ್ರಾಮಸ್ಥರ ದಾಳಿಗೆ ಇಬ್ಬರು ಅರಣ್ಯ ಸಿಬ್ಬಂದಿಗಳು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮತ್ತು ಇಬ್ಬರು ಅರಣ್ಯ ಸಿಬ್ಬಂದಿಗಳು ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಂದ್ರಾದ ಪಯೋನಿ ತಹಸಿಲ್‌ನ ಖಟ್ಖೇಡಾ ಗ್ರಾಮದಲ್ಲಿ ಈಶ್ವರ್ ಮೋಟ್‌ಘರೆ (52) ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದ ಹುಲಿ. ವ್ಯಕ್ತಿಯನ್ನು ಕೊಂದು ಹಾಕಿತ್ತು.

ಘಟನೆ ಬಳಿಕ ಅರಣ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಹುಲಿ ಹಿಡಿಯಲು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಘಟನೆ ಬಳಿಕ ಗಾಯಗೊಂಡ ಅರಣ್ಯ ಸಿಬ್ಬಂದಿಗಳನ್ನು ನಾಗ್ಪುರದ ಆಸ್ಪತ್ರೆಗೆ ದಾಖಲಿಸಲಾಯಿತು, ನಂತರ ಮಹಾರಾಷ್ಟ್ರ ಅರಣ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಹುಲಿಯನ್ನು ಸೆರೆಹಿಡಿದು, ನಾಗಪುರದ ಗೊರೆವಾಡ ರಕ್ಷಣಾ ಕೇಂದ್ರಕ್ಕೆ ರವಾನಿಸಿದರು.

ಈ ನಡುವೆ ಹುಲಿ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) 30,000 ರೂಪಾಯಿ ಪರಿಹಾರ ಮತ್ತು 9.70 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ